
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು : ನೂತನ ಸಚಿವರಾಗಿ ಪ್ರಮಾಣ ಸ್ವೀಕರಿಸಲು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರಿಂದ ಈಗಷ್ಟೇ ಕರೆ ಬಂದಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಖಚಿತಪಡಿಸಿದ್ದಾರೆ.
ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಅವರು, ಸಂಜೆ ಪ್ರಮಾಣ ವಚನ ಸ್ವೀಕರಿಸಲು ಆಗಮಿಸುವಂತೆ ಮುಖ್ಯಮಂತ್ರಿಗಳು ಕರೆ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.
ಸಂಜೆ 4 ಗಂಟೆಗೆ ಲೋಕಭವನದಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ಆಯೋಜಿಸಲಾಗಿದೆ.


