
ಪ್ರಗತಿವಾಹಿನಿ ಸುದ್ದಿ: ರಾಜ್ಯ ಸಚಿವ ಸಂಪುಟ ವಿಸ್ತರಣೆ ಹಿನ್ನೆಲೆಯಲ್ಲಿ 19 ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಿದ್ದಾರೆ.
ಲೋಕಭವನದ ಗಾಜಿನಮನೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ನೂತನ ಸಚಿವರಿಗೆ ಪ್ರಮಾಣವಚನ ಬೋಧಿಸಿದರು. ನೂತನ ಸಚಿವರಾಗಿ ಅಜಯ್ ಸಿಂಗ್, ಹೆಚ್.ಸಿ ಬಾಲಕೃಷ್ಣ,ದೇವರ ಹೆಸರಿನಲ್ಲಿ ಹಾಗೂ ಕೆ.ಎಸ್.ಬಸವಂತಪ್ಪ ಬಸವಣ್ಣನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.
ಬಸವರಾಜ್ ರಾಯರೆಡ್ಡಿ, ಎನ್.ಚಲುವರಾಯಸ್ವಾಮಿ, ಎಸ್.ಎಸ್.ಮಲ್ಲಿಕಾರ್ಜುನ್, ಬಿ.ನಾಗೇಂದ್ರ, ನರೇಂದ್ರಸ್ವಾಮಿ, ಪುಟ್ಟರಂಗಶೆಟ್ಟಿ, ರಿಜ್ವಾನ್ ಅರ್ಷದ್, ರುದ್ರಪ್ಪ ಲಮಾಣಿ, ಸಂತೋಷ್ ಲಾಡ್, ಶಿವಲಿಂಗೇಗೌಡ, ಶಿವರಾಜ್ ತಂಗಡಗಿ, ವಿಜಯಾನಂದ ಕಾಶಪ್ಪನವರ್, ರಘುಮೂರ್ತಿ, ಜಮೀರ್ ಅಹ್ಮದ್ ಪ್ರಮಾಣವಚನ ಸ್ವೀಕರಿಸಿದರು.
ಈ ವೇಳೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಡಿಸಿಎಂ ಪರಮೇಶ್ವರ್, ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೇರಿದಂತೆ ಸಂಪುಟ ಸಚಿವರು ಉಪಸ್ಥಿತರಿದ್ದರು.




