
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಗೋಕಾಕ ಅಂಚೆ ವಿಭಾಗದಲ್ಲಿ ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆ ಉತ್ಪನ್ನಗಳನ್ನು ಮಾರಾಟ ಮಾಡಲು ನೇರ ಪ್ರತಿನಿಧಿಗಳ ನಿಯುಕ್ತಿಗಾಗಿ ಗೋಕಾಕ ವಿಭಾಗದ ಅಂಚೆ ಅಧೀಕ್ಷಕರು ಪ್ರಸ್ತಾವಿಸಿರುತ್ತಾರೆ.
ಆಸಕ್ತ ಅಭ್ಯರ್ಥಿಗಳು ತಮ್ಮ ಇತ್ತೀಚಿನ ಭಾವಚಿತ್ರದೊಂದಿಗೆ ಸ್ವವಿವರ, ಶೈಕ್ಷಣಿಕ ಪ್ರಮಾಣ ಪತ್ರದ ನಕಲುಗಳೊಂದಿಗೆ ಆಗಸ್ಟ್ 7 ರಂದು ಬೆಳಿಗ್ಗೆ 11 ಗಂಟೆಗೆ ಗೋಕಾಕ್‌ನ ಯೋಗಿಕೊಳ್ಳ ರಸ್ತೆಯಲ್ಲಿರುವ ಅಂಚೆ ಅಧೀಕ್ಷಕರ ಕಚೇರಿಯಲ್ಲಿ ಜರುಗಲಿರುವ ನೇರ ಸಂದರ್ಶನಕ್ಕೆ ಹಾಜರಾಗಬಹುದಾಗಿದೆ.
ಅರ್ಹತಾ ನಿಯಮಗಳು
ಅಭ್ಯರ್ಥಿಗಳು 10 ನೇ ತರಗತಿ ಉತ್ತೀರ್ಣರಾಗಿರಬೇಕು, ವಯೋಮಿತಿ 18 ರಿಂದ 50 ವರ್ಷಗಳು, ನಿರುದ್ಯೋಗಿ ಹಾಗೂ ಸ್ವಯಂ ಉದ್ಯೋಗ ನಿರತ ಯುವಕರು, ವಿಮಾ ಕಂಪನಿಗಳ ಮಾಜಿ ಏಜಂಟರು ಹಾಗೂ ಸಲಹೆಗಾರರು, ಮಾಜಿ ಸೈನಿಕರು, ಅಂಗನವಾಡಿ ಕಾರ್ಯಕರ್ತೆಯರು, ಮಹಿಳಾ ಮಂಡಳದ ಕಾರ್ಯಕರ್ತೆಯರು, ಸ್ವಸಹಾಯ ಸಂಘದ ಸದಸ್ಯರು(ಅಂಚೆ ಸಖಿಯರು), ನಿವೃತ್ತ ಪ್ರಧಾನ ಮತ್ತು ಗ್ರಾಮ ಪಂಚಾಯತಿಯ ಸದಸ್ಯರು ಹಾಗೂ ಅಂಚೆ ವಿಭಾಗದ ಮುಖ್ಯಸ್ಥರಿಗೆ ಸಮಜಸವೆಂದು ಕಂಡು ಬಂದ ಯಾವುದೇ ಆಭ್ಯರ್ಥಿಗಳಿಗೆ ಆಯ್ಕೆಯಾದ ಪಕ್ಷದಲ್ಲಿ ಅವಕಾಶ ನೀಡಲಾಗುವುದು.
ನುರಿತ, ಸಂವಹನ ಕಲೆ ಹಾಗೂ ವಿಮಾ ಮಾರಾಟ ಕ್ಷೇತ್ರದಲ್ಲಿ ಪೂರ್ವಾನುಭವ ಹೊಂದಿರುವವರಿಗೆ ಆದ್ಯತೆ ನೀಡಲಾಗುವುದು. ಅಭ್ಯರ್ಥಿಗಳು ಇತರೆ ಯಾವುದೇ ಜೀವ ವಿಮಾ ರಕ್ಷಣೆಯನ್ನು ಒದಗಿಸುವ ಸಂಸ್ಥೆಗಳ ಏಜೆಂಟ್ ಆಗಿರಬಾರದು. ಆಯ್ಕೆಯಾದ ಅಭ್ಯರ್ಥಿಗಳು ರೂ. 500/-ಗಳನ್ನು ರಾಷ್ಟ್ರೀಯ ಉಳಿತಾಯ ಪತ್ರ ಅಥವಾ ಕಿಸಾನ ವಿಕಾಸ ಪತ್ರದ ರೂಪದಲ್ಲಿ ಭದ್ರತಾ ಠೇವಣಿಯನ್ನು ಇಡಬೇಕಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಅಂಚೆ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಗೋಕಾಕ ವಿಭಾಗದ ಅಂಚೆ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




