
ಪ್ರಗತಿವಾಹಿನಿ ಸುದ್ದಿ: ಕಾರ್ಖಾನೆಯಲ್ಲಿ ಕೆಮಿಕಲ್ ಸೋರಿಕೆಯಾಗಿ ಮೂವರು ಕಾರ್ಮಿಕರು ಸಾವನ್ನಪ್ಪಿರುವ ದಾರುಣ ಘಟನೆ ಯಾದಗಿರಿಯಲ್ಲಿ ನಡೆದಿದೆ.
ಯಾದಗಿರಿಯ ಕಡೇಚೂರ್ ಕೈಗಾರಿಕಾ ಪ್ರದೇಶದ ‘ಸಿಲ್ ಲ್ಯಾಬೋರೇಟರಿ’ ಔಷಧ ಕಾರ್ಖಾನೆಯಲ್ಲಿ ಕೆಮಿಕಲ್ ಸೋರಿಕೆಯಾಗಿ ಈ ದುರಂತ ಸಂಭವಿಸಿದೆ. ಕೆಮಿಕಲ್ ಸೋರಿಕೆಯಾಗಿ ವಿಷಗಾಳಿ ಉಸಿರಾಡಿ ಮೂವರು ಕಾರ್ಮಿಕರು ಮೃತಪಟ್ಟಿದ್ದಾರೆ.
ಘಟನೆಯಲ್ಲಿ ಇಬ್ಬರು ಅಸ್ವಸ್ಥಗೊಂಡು ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸೈದಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ದುರಂತ ಸಂಭವಿಸಿದೆ.



