Karnataka NewsLatestPolitics

*ಶಾಸಕ ಸುಬ್ಬಾರೆಡ್ಡಿ ಬೆಂಬಲಿಗರಿಂದ ಮೂರು ತಾಲೂಕುಗಳು ಬಂದ್; ಪ್ರತಿಭಟನೆಗೆ ಮೆಣಸಿನಕಾಯಿ ತಂದು ಆಕ್ರೋಶ; ಆತ್ಮಹತ್ಯೆಗೆ ಯತ್ನಿಸಿದ ಅಭಿಮಾನಿ*

ಪ್ರಗತಿವಾಹಿನಿ ಸುದ್ದಿ: ಸಂಪುಟ ವಿಸ್ತರಣೆ ವೇಳೆ ಶಾಸಕ ಸುಬ್ಬಾರೆಡ್ಡಿಗೆ ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಕಾಂಗ್ರೆಸ್ ಮುಖಂಡರು ಬೆಂಬಲಿಗರು ಸಿಡಿದಿದ್ದೆದ್ದಿದ್ದು, ಇಂದು ಚಿಕ್ಕಬಳ್ಳಾಪುರ ಜಿಲ್ಲೆಯ ಮೂರು ತಾಲೂಕುಗಳನ್ನು ಬಂದ್ ಮಡಿ ಪ್ರತಿಭಟನೆ ನಡೆಸಿದ್ದಾರೆ.

ಬಾಗೇಪಲ್ಲಿ, ಗುಡಿಬಂಡೆ ಮತ್ತು ಚೇಳೂರು ತಾಲೂಕುಗಳು ಸಂಪೂರ್ಣ ಬಂದ್​ ಆಗಿದ್ದು, ಸುಬ್ಬಾರೆಡ್ಡಿ ಬೆಂಬಲಿಗರು, ಕಾಂಗ್ರೆಸ್ ಮುಖಂಡರು ಬೀದಿಗಿಳಿದು ಹೋರಾಟ ನಡೆಸಿದ್ದಾರೆ.

ಬೆಳಿಗ್ಗೆ 6 ಗಂಟೆಯಿಂದಲೇ ರಸ್ತೆಗೆ ಇಳಿದಿರುವ ಪ್ರತಿಭಟನಾಕಾರರು ಟೈರ್‌ಗೆ ಬೆಂಕಿ ಹಚ್ಚಿ ರಸ್ತೆ ತಡೆ ನಡೆಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮತ್ತೊಂದೆಡೆ ಹಸಿಮೆಣಸಿನಕಾಯಿ ಕೈಯಲ್ಲಿ ಹಿಡಿದು ಕಿಡಿಕಾರಿದ್ದಾರೆ. ಸುಬ್ಬಾರೆಡ್ಡಿ ಅವರಿಗೆ ಸಚಿವ ಸ್ಥಾನ ವಂಚಿಸಿ ಕಾಂಗ್ರೆಸ್ ಹೈಕಮಾಂಡ್ ಖಾರ ಕೊಟ್ಟಿದೆ ಎಂದು ಕಿಡಿಕಾರಿದ್ದಾರೆ.

ಬಾಗೇಪಲ್ಲಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿ ಸೇರಿದಂತೆ ಪ್ರಮುಖ ಹೆದ್ದಾರಿಗಳಲ್ಲಿ ಪ್ರತಿಭಟನೆ ತೀವ್ರಗೊಂಡಿದೆ. ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರಕ್ಕೆ ಅನ್ಯಾಯವಾಗಿದೆ ಎಂದು ಕಾಂಗ್ರೆಸ್ ಹೈಕಮಾಂಡ್, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಪ್ರತಿಭಟನೆ ವೇಳೆ ಸುಬ್ಬಾರೆಡ್ಡಿ ಅಭಿಮಾನಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಕೂಡ ನಡೆದಿದೆ. ಸ್ಥಳದಲ್ಲಿದ್ದ ಇತರರು ಆತನನ್ನು ರಕ್ಷಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button