Karnataka NewsLatestPolitics

*ನಾಗೇಂದ್ರ ರಾಜೀನಾಮೆ ನೀಡುವವರೆಗೂ ಅಧಿವೇಶನ ಸುಗಮವಾಗಿ ನಡೆಯಲು ಬಿಡಲ್ಲ: ಛಲವಾದಿ ನಾರಾಯಣಸ್ವಾಮಿ*

ಪ್ರಗತಿವಾಹಿನಿ ಸುದ್ದಿ: ವಾಲ್ಮೀಕಿ ನಿಗಮದ ಹಗರಣದ ಆರೋಪ ಹೊತ್ತಿರುವ ನಾಗೇಂದ್ರ ಅವರನ್ನು ಮತ್ತೆ ಸಚಿವರನ್ನಾಗಿ ಮಾಡಲಾಗಿದ್ದು ಸರಿಯಲ್ಲ. ಮೊದಲು ಅವರು ರಾಜೀನಾಮೆ ನೀಡಬೇಕು ಎಂದು ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆಗ್ರಹಿಸಿದ್ದಾರೆ.

Home add -Advt

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಛಲವಾದಿ ನಾರಾಯಣಸ್ವಾಮಿ ಕಾಂಗ್ರೆಸ್ ನಲ್ಲಿ ಸಚಿವ ಸ್ಥಾನ ಹರಾಜಾಗಿದೆ. ಈ ಬಗ್ಗೆ ಆಡಿಯೋ, ವಿಡಿಯೋಗಳು ವೈರಲ್ ಆಗುತ್ತಿವೆ. ಸಚಿವ ಸ್ಥಾನ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿದರು.

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ 187 ಕೋಟಿ ದುರ್ಬಳಕೆ ಪ್ರಕರಣದ ಆರೋಪ ಎದುರಿಸುತ್ತಿರುವ ಬಿ.ನಾಗೇಂದ್ರ ಅವರನ್ನು ಮತ್ತೆ ಸಚಿವರನ್ನಾಗಿ ಮಾಡಲಾಗಿದೆ. ಇದು ಕಾಂಗ್ರೆಸ್ ಭ್ರಷ್ಟರ ಪರವಾಗಿದೆ ಎಂಬುದಕ್ಕೆ ಸಾಕ್ಷಿ. ಜಾಮೀನಿನನ ಮೇಲೆ ಹೊರಗಿರುವ ನಾಗೇಂದ್ರ ಅವರನ್ನು ಮತ್ತೆ ಮಂತ್ರಿ ಮಾಡಿರುವುದನ್ನು ಒಪ್ಪುವುದಿಲ್ಲ. ಅವರು ರಾಜೀನಾಮೆ ನೀಡುವವರೆಗೂ ಆ.13ರಿಂದ ಆರಂಭವಾಗಲಿರುವ ವಿಧಾನಮಂಡಲ ಅಧಿವೇಶನ ಸುಗಮವಾಗಿ ನಡೆಯಲು ಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದರು.

Related Articles

Back to top button