Belagavi NewsBelgaum NewsEducationKannada NewsKarnataka News

*ಕಿತ್ತೂರು ರಾಣಿ ಚನ್ನಮ್ಮ ವಿವಿಯಲ್ಲಿ ಎರಡು ದಿನಗಳ ರಾಷ್ಟ್ರೀಯ ಕಾರ್ಯಾಗಾರ ಆರಂಭ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕಿತ್ತೂರು ರಾಣಿ ಚನ್ನಮ್ಮ ವಿಶ್ವವಿದ್ಯಾಲಯ, ಬೆಳಗಾವಿಯ ಗಣಕ ವಿಜ್ಞಾನ ವಿಭಾಗದ ವತಿಯಿಂದ PM-UShA MERU ಯೋಜನೆಯ (Soft Components–22 & 25) ಅಡಿಯಲ್ಲಿ, ಯುನಿವರ್ಸಿಟಿ ಆಫ್ ಸಾಲ್ಫರ್ಡ್, ಮ್ಯಾಂಚೆಸ್ಟರ್ (ಯು.ಕೆ.) ಸಹಯೋಗದಲ್ಲಿ “National Workshop on Intelligent Systems & Machine Learning for Emerging Trends in Scientific Research (NWISML-2026)” ಎಂಬ ಎರಡು ದಿನಗಳ ರಾಷ್ಟ್ರೀಯ ಕಾರ್ಯಗಾರವನ್ನು ಎರಡು ದಿನ ವಿಶ್ವವಿದ್ಯಾಲಯದಲ್ಲಿ ಆಯೋಜಿಸಲಾಗಿದೆ.

ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಹುಬ್ಬಳ್ಳಿಯ  ಕೆ.ಎಲ್.ಇ. ತಾಂತ್ರಿಕ ವಿಶ್ವವಿದ್ಯಾಲಯದ ಕುಲಸಚಿವರಾದ ಪ್ರೊ. ಬಸವರಾಜ ಅನಾಮಿ ಅವರು ಮಾತನಾಡಿ, ಇಂದಿನ ತಂತ್ರಜ್ಞಾನ ಯುಗದಲ್ಲಿ ಕೃತಕ ಬುದ್ಧಿಮತ್ತೆ ಹಾಗೂ ಯಂತ್ರ ಕಲಿಕೆ ಕ್ಷೇತ್ರಗಳಲ್ಲಿ ಸಂಶೋಧನೆಗೆ ಅಪಾರ ಅವಕಾಶಗಳಿದ್ದು, ಇಂತಹ ಕಾರ್ಯಗಾರಗಳು ಯುವ ಸಂಶೋಧಕರಲ್ಲಿ ಹೊಸ ಚಿಂತನೆ ಮತ್ತು ಸಂಶೋಧನಾ ಮನೋಭಾವವನ್ನು ಬೆಳೆಸಲಿವೆ ಎಂದು ಅಭಿಪ್ರಾಯಪಟ್ಟರು.

Home add -Advt

ಕಾರ್ಯಗಾರದಲ್ಲಿ ಅಂತರರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿಯಾಗಿ ಡಾ. ಶಿವಕುಮಾರ್ ಪಿ. (University of Salford, Manchester, UK) ಅವರು ಭಾಗವಹಿಸಿ, ಇತ್ತೀಚಿನ ಸಂಶೋಧನಾ ಪ್ರವೃತ್ತಿಗಳು, ಕೃತಕ ಬುದ್ಧಿಮತ್ತೆಯ ಬೆಳವಣಿಗೆಗಳು ಹಾಗೂ ಜಾಗತಿಕ ಸಂಶೋಧನಾ ಸಹಯೋಗದ ಮಹತ್ವದ ಕುರಿತು ವಿಶೇಷ ಉಪನ್ಯಾಸ ನೀಡಲಿದ್ದಾರೆ. ಭಾರತೀಯ ಉನ್ನತ ಶಿಕ್ಷಣ ಸಂಸ್ಥೆಗಳು ಅಂತರರಾಷ್ಟ್ರೀಯ ಸಹಯೋಗದ ಮೂಲಕ ಗುಣಮಟ್ಟದ ಸಂಶೋಧನೆಗೆ ಹೆಚ್ಚಿನ ಆದ್ಯತೆ ನೀಡಬೇಕೆಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದರು.

ಕಾರ್ಯಕ್ರಮದ ಅಧಯಕ್ಷತೆಯನ್ನು ವಹಿಸಿದ್ದ ಮಾನ್ಯ ಕುಲಪತಿಗಳಾದ ಪ್ರೊ. ಸಿ. ಎಂ. ತ್ಯಾಗರಾಜ್ ಅವರು ಮಾತನಾಡಿ, PM-USHA MERU ಯೋಜನೆಯಡಿ ಆಯೋಜಿಸಲಾಗುತ್ತಿರುವ ಈ ರಾಷ್ಟ್ರೀಯ ಕಾರ್ಯಗಾರವು ವಿಶ್ವವಿದ್ಯಾಲಯದ ಸಂಶೋಧನಾ ಸಂಸ್ಕೃತಿಯನ್ನು ಮತ್ತಷ್ಟು ಬಲಪಡಿಸುವುದರ ಜೊತೆಗೆ ವಿದ್ಯಾರ್ಥಿಗಳು ಹಾಗೂ ಸಂಶೋಧನಾ ವಿದ್ಯಾರ್ಥಿಗಳಿಗೆ ಅತ್ಯಾಧುನಿಕ ತಂತ್ರಜ್ಞಾನಗಳ ಕುರಿತು ಅರಿವು ಮೂಡಿಸುವಲ್ಲಿ ಮಹತ್ವದ ಪಾತ್ರ ವಹಿಸಲಿದೆ ಎಂದು ತಿಳಿಸಿದ್ದಾರೆ.

ಪ್ರೊ. ಶಿವಾನಂದ ಗೋರನಾಳೆ, ಗಣಕ ವಿಜ್ಞಾನ ವಿಭಾಗದ ಅಧ್ಯಕ್ಷರು ಮಾತನಾಡಿ, ಈ ಕಾರ್ಯಾಗಾರವು ಸಂಶೋಧನಾ ವಿದ್ಯಾರ್ಥಿಗಳು ಹಾಗೂ ಬೋಧಕ ಸಿಬ್ಬಂದಿಗೆ ಅತ್ಯಾಧುನಿಕ ತಂತ್ರಜ್ಞಾನ ಮತ್ತು ಸಂಶೋಧನಾ ಕ್ಷೇತ್ರದ ಹೊಸ ಬೆಳವಣಿಗೆಗಳ ಕುರಿತು ಅರಿವು ಮೂಡಿಸುವ ಉತ್ತಮ ವೇದಿಕೆಯಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕರೆ ನೀಡಿದರು.

ಕಾರ್ಯಾಗಾರದ ಉದ್ಘಾಟನಾ ಸಮಾರಂಭದಲ್ಲಿ ಮಾನ್ಯ ಕುಲಸಚಿವರಾದ ಸಂತೋಷ ಕಾಮಗೌಡ ಕೆ.ಎ.ಎಸ್. ಕಾರ್ಯಾಗಾರದ ಎರಡನೇ ದಿನವಾದ 06 ಆಗಸ್ಟ್ 2026 ರಂದು ಮತ್ತಷ್ಟು ತಾಂತ್ರಿಕ ಅಧಿವೇಶನಗಳು ಹಾಗೂ ಸಂಶೋಧನಾ ಚರ್ಚೆಗಳು ನಡೆಯಲಿದ್ದು ಇದರ ಸದುಪಯೋಗವನ್ನು ಪಡೆದುಕೊಳ್ಳುವಂತೆ ತಿಳಿಸಿದರು. 

ಪ್ರೊ. ಡಿ. ಎನ್. ಪಾಟೀಲ್, ಕುಲಸಚಿವರು (ಮೌಲ್ಯಮಾಪನ), ಶ್ರೀಮತಿ ಸಪ್ನ ಎಂ. ಎ., ಹಣಕಾಸು ಅಧಿಕಾರಿಗಳು, ಪ್ರೊ. ವಿ. ಬಿ. ಅವಟಿ, ಡೀನರು, ವಿಜ್ಞಾನ ಮತ್ತು ತಂತ್ರಜ್ಞಾನ ನಿಕಾಯ, ಪ್ರೊ. ಸಿ. ಎನ್. ಮನಗೂಳಿ, ನಿರ್ದೇಶಕರು, IQAC, ರಾಚವಿ, ಬೆಳಗಾವಿ, ಡಾ. ನಂದಿನಿ ದೇವರಮನಿ, ಸಂಯೋಜಕರು, PM-USHA (MERU), ಪ್ರೊ. ಪರಶುರಾಮ ಬನ್ನಿಗಿಡದ, ಪ್ರಾಧ್ಯಾಪಕರು, ಗಣಕ ವಿಜ್ಞಾನ ವಿಭಾಗ ಹಾಗೂ ಡಾ. ಮಲ್ಲಮ್ಮ ರೆಡ್ಡಿ, ಸಹಾಯಕ ಪ್ರಾಧ್ಯಾಪಕರು, ಗಣಕ ವಿಜ್ಞಾನ ವಿಭಾಗ ಉಪಸ್ಥಿತರಿದ್ದರು.

Related Articles

Back to top button