Karnataka NewsLatestPolitics
*ಮಹದೇವಪ್ಪ ಹೆಸರನ್ನು ಸಿದ್ದರಾಮಯ್ಯ ಸಚಿವರ ಪಟ್ಟಿಯಲ್ಲಿ ಶಿಫಾರಸು ಮಾಡಿದ್ದರು; ಆದರೆ ಹೈಕಮಾಂಡ್ ಹೊಸಬರನ್ನು ಆಯ್ಕೆ ಮಾಡಿದೆ: ಸಚಿವ ಯತೀಂದ್ರ ಸ್ಪಷ್ಟನೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯ ಸಚಿವ ಸಂಪುಟ ವಿಸ್ತರಣೆ ಹಾಗೂ ಹೆಚ್.ಸಿ.ಮಹದೇವಪ್ಪ ಅವರನ್ನು ಈ ಬಾರಿ ಸಂಪುಟದಿಂದ ಕೈಬಿಟ್ಟಿರುವ ವಿಚಾರವಾಗಿ ಪ್ರತಿಕ್ರಿಯಿಸಿರುವ ಸಚಿವ ಯತೀಂದ್ರ ಸಿದ್ದರಾಮಯ್ಯ, ಅಚ್ಚರಿ ಹೇಳಿಕೆ ನೀಡಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯತೀಂದ್ರ ಸಿದ್ದರಾಮಯ್ಯ, ಹೆಚ್.ಸಿ.ಮಹದೇವಪ್ಪ ಅವರಿಗೆ ಸಚಿವ ಸ್ಥಾನ ಸಿಗದಿರುವ ವಿಚಾರವಾಗಿ, ಮಹದೇವಪ್ಪ ಹೆಸರನ್ನು ಸಿದ್ದರಾಮಯ್ಯ ಸಚಿವರ ಪಟ್ಟಿಯಲ್ಲಿ ಶಿಫಾರಸು ಮಾಡಿದ್ದರು. ಆದರೆ, ಹೈಕಮಾಂಡ್ ಈ ಬಾರಿ ಹೊಸ ಮುಖವಾಗಿ ನರೇಂದ್ರ ಸ್ವಾಮಿ ಅವರನ್ನು ಆಯ್ಕೆ ಮಾಡಿದೆ ಎಂದು ಸ್ಪಷ್ಟಪಡಿಸಿದರು.
ಹಿರಿಯರಾದ ಮಹದೇವಪ್ಪ ಮತ್ತು ತನ್ವೀರ್ ಸೇಠ್ ಅವರ ಮನವೊಲಿಸುವ ಕಾರ್ಯವನ್ನು ಪಕ್ಷದ ವರಿಷ್ಠರು ಮಾಡಿದ್ದಾರೆ ಎಂದರು. ಕುರುಬ ಸಮುದಾಯದ ಅಸಮಾಧಾನದಿಂದಾಗಿ ಮತ್ತು ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನ ಬಿಟ್ಟಿದ್ದರಿಂದ ನನಗೆ ಸಚಿವ ಸ್ಥಾನ ಲಭಿಸಿದೆ ಎಂದು ಯತೀಂದ್ರ ಸಿದ್ದರಾಮಯ್ಯ ಇದೇ ವೇಳೆ ತಿಳಿಸಿದ್ದಾರೆ.



