Belagavi NewsBelgaum NewsKannada NewsKarnataka NewsPolitics
*ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರನ್ನು ಭೇಟಿಯಾದ ಪದ್ಮಶ್ರೀ ಡಾ. ಪ್ರಭಾಕರ ಕೋರೆ*

ಪ್ರಗತಿವಾಹಿನಿ ಸುದ್ದಿ: ಕಾಹೇರ್ (KAHER) ಕುಲಾಧಿಪತಿ ಹಾಗೂ ಪದ್ಮಶ್ರೀ ಪುರಸ್ಕೃತರಾದ ಡಾ. ಪ್ರಭಾಕರ ಬಿ. ಕೋರೆ ಅವರು ಇಂದು ಮಾಜಿ ಪ್ರಧಾನಮಂತ್ರಿ ಹೆಚ್. ಡಿ. ದೇವೇಗೌಡ ಅವರನ್ನು ಅವರ ನಿವಾಸದಲ್ಲಿ ಭೇಟಿಯಾಗಿ, ಇತ್ತೀಚೆಗೆ ನಿಧನರಾದ ಅವರ ಧರ್ಮಪತ್ನಿ ಚಿನ್ನಮ್ಮ ದೇವೇಗೌಡ ಅವರ ಅಗಲಿಕೆಗೆ ತೀವ್ರ ಸಂತಾಪ ವ್ಯಕ್ತಪಡಿಸಿದರು.
ಚಿನ್ನಮ್ಮ ಅವರ ನಿಧನವು ದೇವೇಗೌಡರ ಕುಟುಂಬಕ್ಕೆ ಮಾತ್ರವಲ್ಲದೆ, ಸಾರ್ವಜನಿಕ ಬದುಕಿಗೆ ಅಪಾರ ನಷ್ಟವಾಗಿದೆ ಎಂದು ಡಾ. ಕೋರೆ ಅಭಿಪ್ರಾಯಪಟ್ಟರು. ಚಿನ್ನಮ್ಮ ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಹಾಗೂ ಈ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ದೇವೇಗೌಡರು ಮತ್ತು ಅವರ ಕುಟುಂಬದ ಸದಸ್ಯರಿಗೆ ಕರುಣಿಸಲಿ ಎಂದು ಅವರು ಪ್ರಾರ್ಥಿಸಿದರು.
ಬಳಿಕ ದೇವೇಗೌಡರ ಆರೋಗ್ಯವನ್ನು ವಿಚಾರಿಸಿದ ಡಾ. ಕೋರೆ, ಅವರೊಂದಿಗೆ ಕೆಲಕಾಲ ಆತ್ಮೀಯವಾಗಿ ಮಾತುಕತೆ ನಡೆಸಿದರು.
ಈ ಸಂದರ್ಭದಲ್ಲಿ ದೇವೇಗೌಡರ ಮೊಮ್ಮಗ ನಿಖಿಲ್ ಕುಮಾರಸ್ವಾಮಿ ಅವರು ಸಹ ಉಪಸ್ಥಿತರಿದ್ದರು.




