
ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭೇಟಿ ಬೆನ್ನಲ್ಲೇ ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ್ ಹೊರಟ್ಟಿ ರಾಜೀನಾಮೆ ನೀಡಿದ್ದಾರೆ.
ಅವಧಿ ಮುಗಿಯುವ ಮುನ್ನವೇ ಆಡಳಿತಾರೂಢ ಕಾಂಗ್ರೆಸ್ ನಾಯಕರು ರಾಜೀನಾಮೆ ಕೇಳಿದ್ದಕ್ಕೆ ಹೊರಟ್ಟಿಯವರು ತಾವು ರಾಜೀನಾಮೆ ನೀಡುವುದಿಲ್ಲ ಎಂದು ಪಟ್ಟು ಹಿಡಿದಿದ್ದರು. ಬಳಿಕ ಕಾಂಗ್ರೆಸ್ ಇಂದು ಹೊರಟ್ಟಿ ವಿರುದ್ಧ ಅವಿಶ್ವಾಸ ನಿರ್ಣಯ ನೋಟಿಸ್ ಜಾರಿಗೆ ಮುಂದಾಗಿತ್ತು. ಇದರ ಬೆನ್ನಲ್ಲೇ ಆಗಸ್ಟ್ 14ರಂದು ರಾಜೀನಾಮೆ ನೀಡುವುದಾಗಿ ಹೊರಟ್ಟಿ ತಿಳಿಸಿದ್ದರು.
ಇಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ಚರ್ಚಿಸಿದ ಬಳಿಕ ಬಸವರಾಜ್ ಹೊರಟ್ಟಿ ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಸ್ವಇಚ್ಛೆಯಿಂದ ರಾಜೀನಾಮೆ ನೀಡಿದ್ದಾಗಿ ತಮ್ಮ ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಹಂಗಾಮಿ ಸಭಾಪತಿಯಾಗಿ ಹೊರಟ್ಟಿ ಮುಂದುವರೆಯುವ ಸಾಧ್ಯತೆ ಇದೆ ಎನ್ನಲಾಗಿದೆ.


