CrimeKannada NewsKarnataka NewsLatest

*ಕಾರ್ ಮತ್ತು ಸಿಲಿಂಡ‌ರ್ ಲಾರಿ ನಡುವೆ ಡಿಕ್ಕಿ: ಮೂವರ ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಕಾರು ಮತ್ತು ಎಲ್‌ಪಿಜಿ ಗ್ಯಾಸ್ ಸಿಲಿಂಡ‌ರ್ ಹೊತ್ತೊಯ್ಯುತ್ತಿದ್ದ ಲಾರಿ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪ ಸಂಭವಿಸಿದೆ.

ಇದೇ ಘಟನೆಯಲ್ಲಿ ಇಬ್ಬರು ತೀವ್ರವಾಗಿ ಗಾಯಗೊಂಡಿದ್ದು, ಅವರ ಪರಿಸ್ಥಿತಿ ಚಿಂತಾಜನಕವಾಗಿದೆ. ವೇಗವಾಗಿ ಬಂದ ಕಾರು ಚಾಲಕನ ನಿಯಂತ್ರಣ ತಪ್ಪಿ ಎದುರಿನಿಂದ ಬರುತ್ತಿದ್ದ ಸಿಲಿಂಡ‌ರ್ ಲಾರಿಗೆ ನೇರವಾಗಿ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಒಳಗಿದ್ದವರು ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಅಪಘಾತದ ಶಬ್ದ ಕೇಳಿ ತಕ್ಷಣವೇ ಸ್ಥಳಕ್ಕೆ ಧಾವಿಸಿದ ಸ್ಥಳೀಯರು ಕಾರಿನಲ್ಲಿ ಸಿಲುಕಿಕೊಂಡಿದ್ದ ಗಾಯಾಳುಗಳನ್ನು ಹೊರತೆಗೆದು ಆಸ್ಪತ್ರೆಗೆ ರವಾನಿಸಲು ನೆರವಾಗಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಇಬ್ಬರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರಿಗೆ ತುರ್ತು ಚಿಕಿತ್ಸೆ ನೀಡಲಾಗುತ್ತಿದೆ.

ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button