Karnataka NewsLatestPolitics

*ಖಾತೆ ಹಂಚಿಕೆ ಕಸರತ್ತು: ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿಯಾದ ಸಿಎಂ ಡಿ.ಕೆ.ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗಿದ್ದು, ಇದೀಗ ನೂತನ ಸಚಿವರಿಗೆ ಖಾತೆ ಹಂಚಿಕೆ ಕಸರತ್ತು ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿಯಾಗಿ ಚರ್ಚಿಸಿದರು.

ಖಾತೆ ಹಂಚಿಕೆ ವಿಚಾರವಾಗಿ ಸಿದ್ದರಾಮ್ಯಯ ಬಳಿ ಮಾತುಕತೆ ಬಳಿಕ ಸಿಎಂ ಡಿ.ಕೆ.ಶಿವಕುಮಾರ್ ಹೈಕಮಾಂಡ್ ಭೇಟಿಗೆ ದೆಹಲಿಗೆ ತೆರಳಿದ್ದಾರೆ. ದೆಹಲಿಯಲ್ಲಿ ವರಿಷ್ಠರೊಂದಿಗೆ ಸಮಾಲೋಚನೆ ನಡೆಸಿ ಬಳಿಕ ಯಾವ ಸಚಿವರಿಗೆ ಯಾವ ಖಾತೆ ಎಂಬುದು ಫೈನಲ್ ಆಗಲಿದೆ.

Related Articles

Back to top button