Belagavi NewsBelgaum NewsCrimeKannada NewsNational

*ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನ ಕೊಲೆ: ತಿಂಗಳ ಬಳಿಕ ಕೊಲೆ ರಹಸ್ಯ ಬಯಲು*

ಪ್ರಗತಿವಾಹಿನಿ ಸುದ್ದಿ: ಪತ್ನಿಯೇ ತನ್ನ ಪ್ರಿಯಕರನ ಜೊತೆ ಸೇರಿ ಕೊಲೆ ಮಾಡಿರುವ ಆರೋಪ ಕೇಳಿಬಂದಿದ್ದು, ಸುಮಾರು ಆರು ತಿಂಗಳ ಹಿಂದೆ ನಡೆದಿದ್ದ ಘಟನೆ ಇದೀಗ ತಡವಾಗಿ ಬೆಳಕಿಗೆ ಬಂದಿದೆ.

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಖಡಕಲಾಟ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಮೃತರನ್ನು ರಾಘು ಗಾವಡೆ (40) ಎಂದು ಗುರುತಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಪತ್ನಿ ಬಂಗಾರಿ ಗಾವಡೆ ಹಾಗೂ ಆಕೆಯ ಪ್ರಿಯಕರ ರಾಮಾ ರಾಣಗೆ ಆರೋಪಿ ಎಂದು ಗುರುತಿಸಲಾಗಿದೆ.

Home add -Advt

ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ರಾಘುವನ್ನು ಹೊಲಕ್ಕೆ ಕರೆಯಿಸಿಕೊಂಡು ಬಳಿಕ ಪ್ರಿಯಕರನ ಜೊತೆ ಸೇರಿ ಕೊಲೆ ಮಾಡಲಾಗಿದೆ ಎನ್ನಲಾಗಿದೆ. ಕೊಲೆ ಬಳಿಕ ಪತ್ನಿ, ಗಂಡ ಕುರಿ ಕಾಯಲು ಬೇರೆ ಜಿಲ್ಲೆಗೆ ತೆರಳಿದ್ದಾನೆ ಎಂದು ಕುಟುಂಬಸ್ಥರನ್ನು ನಂಬಿಸಿದ್ದಾಳೆ ಎನ್ನಲಾಗಿದೆ.

ಆದರೆ ರಾಘು ಗಾವಡೆ ಅವರ ಸಹೋದರ ಲಗಮಣ್ಣ ಅವರಿಗೆ ಅನುಮಾನ ಮೂಡಿದ್ದು, ಈ ಕುರಿತು ವಿಚಾರಣೆ ನಡೆಸಿದಾಗ ಪ್ರಕರಣದ ಸತ್ಯಾಂಶ ಹೊರಬಂದಿದೆ ಎನ್ನಲಾಗಿದೆ. ಬಳಿಕ ಅವರು ಪೊಲೀಸರಿಗೆ ದೂರು ನೀಡಿದ್ದಾರೆ.

ದೂರಿನ ಆಧಾರದ ಮೇಲೆ ತನಿಖೆ ಕೈಗೊಂಡ ಖಡಕಲಾಟ ಪೊಲೀಸರು ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ. 

ಖಡಕಲಾಟ ಪೊಲೀಸ್ ಠಾಣೆಗೆ  ಬೆಳಗಾವಿ ಎಸ್ಪಿ ಕೆ. ರಾಮರಾಜನ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಕ್ರಮ ಸಂಬಂಧವೇ ಕೊಲೆಗೆ ಕಾರಣವಾಗಿರಬಹುದು ಎಂಬುದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ ಎಂದು ಮಾಹಿತಿ ನೀಡಿದ್ದಾರೆ.

Related Articles

Back to top button