Karnataka NewsLatestPolitics

*ಸಚಿವ ನಾಗೇಂದ್ರಗೆ ಬಿಗ್ ರಿಲೀಫ್*

ಪ್ರಗತಿವಾಹಿನಿ ಸುದ್ದಿ: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮ ಹಣ ವರ್ಗಾವಣೆ ಹಗರಣದ ಆರೋಪ ಎದುರಿಸುತ್ತಿರುವ ಸಚಿವ ಬಿ. ನಾಗೇಂದ್ರ ಅವರಿಗೆ ಹೈಕೋರ್ಟ್‌ ಬಿಗ್ ರಿಲೀಫ್ ನೀಡಿದೆ.

ನಾಗೇಂದ್ರ ಅವರ ಜಾಮೀನು ಆದೇಶದಲ್ಲಿದ್ದ ಪ್ರಮುಖ ಷರತ್ತೊಂದಕ್ಕೆ ಹೈಕೋರ್ಟ್ ತಡೆ ನೀಡಿ ಮಾರ್ಪಾಡು ಮಾಡಿದೆ. ರಾಜ್ಯ ಬಿಟ್ತು ಬೇರೆ ರಾಜ್ಯಗಳಿಗೆ ಪ್ರಯಾಣಕ್ಕೆ ಸಂಬಂಧಿಸಿದಂತೆ ಷರತ್ತು ಸಡಿಲಿಕೆ ಮಾಡಿದೆ.

ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಜಾಮೀನು ನೀಡುವಾಗ “ನ್ಯಾಯಾಲಯದ ಅನುಮತಿಯಿಲ್ಲದೆ ರಾಜ್ಯ ಬಿಟ್ಟು ತೆರಳಬಾರದು” ಎಂದು ವಿಧಿಸಿದ್ದ ಷರತ್ತಿಗೆ ಹೈಕೋರ್ಟ್ ತಡೆ ನೀಡಿದೆ.

ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು 2024ರ ಅಕ್ಟೋಬರ್ 14ರಂದು ನಾಗೇಂದ್ರ ಅವರಿಗೆ ಜಾಮೀನು ನೀಡುವಾಗ ಕರ್ನಾಟಕ ರಾಜ್ಯದಿಂದ ಹೊರಗೆ ಪ್ರಯಾಣಿಸಬೇಕಾದರೆ ನ್ಯಾಯಾಲಯದಿಂದ ಮುಂಚಿತವಾಗಿ ಲಿಖಿತ ಅನುಮತಿ ಪಡೆಯುವುದು ಕಡ್ಡಾಯ ಎಂಬ ಸ್ಪಷ್ಟ ಷರತ್ತು ವಿಧಿಸಿತ್ತು. ಇದನ್ನು ಪ್ರಶ್ನಿಸಿ ನಾಗೇಂದ್ರ ಮೇಲ್ಮನವಿ ಸಲ್ಲಿಸಿದ್ದರು. ಆದರೆ ವಿಶೇಷ ಕೋರ್ಟ್ ಅದನ್ನು ವಜಾಗೊಳಿಸಿತ್ತು. ಇದನ್ನು ಪ್ರಶ್ನಿಸಿ ನಾಗೇಂದ್ರ ಹೈಕೋರ್ಟ್ ಮೊರೆ ಹೋಗಿದ್ದರು.

ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಅನುಮತಿ ಇಲ್ಲದೆ ರಾಜ್ಯ ಬಿಟ್ಟು ತೆರಳುವಂತಿಲ್ಲ ಎಂಬ ಷರತ್ತನ್ನು ಮಾರ್ಪಡಿಸಿ ಅನುಮತಿಯಿಲ್ಲದೆ ದೇಶ ಬಿಟ್ಟು ತೆರಳುವಂತಿಲ್ಲ ಎಂದು ಆದೇಶಿಸಿದೆ. ಪ್ರಕರಣದಲ್ಲಿ ಆಕ್ಷೇಪಣೆ ಸಲ್ಲಿಸಲು ಜಾರಿ ನಿರ್ದೇಶನಾಲಯಕ್ಕೆ (ED) ಆಗಸ್ಟ್ 12 ರವರೆಗೆ ಕಾಲಾವಕಾಶ ನೀಡಲಾಗಿದೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button