Kannada NewsKarnataka NewsLatestTravel

*ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಅಪಘಾತ: ಇಬ್ಬರ ಸಾವು*

ಪ್ರಗತಿವಾಹಿನಿ ಸುದ್ದಿ: ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಬೆಂಗಳೂರಿನಿಂದ ಚಿತ್ರದುರ್ಗದತ್ತ ತೆರಳುತ್ತಿದ್ದ ವಾಹನಗಳ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ಸ್ಥಳದಲ್ಲೇ ಇಬ್ಬರು ದಾರುಣವಾಗಿ ಮೃತಪಟ್ಟಿದ್ದಾರೆ.

ತುಮಕೂರು ಸೋರೆಕುಂಟೆ ಬಳಿ ಈ ಅಪಘಾತ ಸಂಭವಿಸಿದೆ. ಟ್ರ್ಯಾಕ್ಟರ್‌ಗಳನ್ನು ತುಂಬಿಕೊಂಡು ಸಾಗುತ್ತಿದ್ದ ಲಾರಿಗೆ, ಹಿಂಬದಿಯಿಂದ ಅತಿ ವೇಗವಾಗಿ ಬಂದ ಬೊಲೆರೋ ವಾಹನ ಬಲವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬೊಲೆರೋ ವಾಹನ ನಜ್ಜುಗುಜ್ಜಾಗಿದ್ದು, ಅದರಲ್ಲಿದ್ದ ಇಬ್ಬರೂ ತೀವ್ರ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

Home add -Advt

ಮೃತರ ಪೈಕಿ ಒಬ್ಬರನ್ನು ಷಣ್ಮುಗ (50) ಎಂದು ಗುರುತಿಸಲಾಗಿದೆ. ಅವರೊಂದಿಗೆ ಪ್ರಯಾಣಿಸುತ್ತಿದ್ದ ಮತ್ತೊಬ್ಬ ವ್ಯಕ್ತಿಯ ಗುರುತು ಇನ್ನು ಪತ್ತೆಯಾಗಬೇಕಿದ್ದು ಪೊಲೀಸರು ಅವರ ಚಹರೆ ಹಾಗೂ ದಾಖಲೆಗಳ ಆಧಾರದ ಮೇಲೆ ತನಿಖೆ ಮುಂದುವರಿಸಿದ್ದಾರೆ.

ಘಟನಾ ಸ್ಥಳಕ್ಕೆ ಕೋರ ಪೊಲೀಸ್ ಠಾಣೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಈ ಸಂಬಂಧ ಕೋರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Back to top button