*BREAKING: ಕಾವೇರಿ ಕಿಚ್ಚು: CWRC ಆದೇಶ ಮತ್ತೆ ಎತ್ತಿ ಹಿಡಿದ CWMA*

ಪ್ರಗತಿವಾಹಿನಿ ಸುದ್ದಿ: ಕಾವೇರಿ ನದಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಕರ್ನಾಟಕಕ್ಕೆ CWMAಯಲ್ಲಿ ಹಿನ್ನಡೆಯಾಗಿದೆ. ತಮಿಳುನಾಡಿಗೆ ಪ್ರತಿದಿನ 12,000 ಕ್ಯೂಸೆಕ್ ನೀರು ಬಿಡಬೇಕು ಎಂಬ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಆದೇಶವನ್ನು CWMA ಎತ್ತಿ ಹಿಡಿದಿದೆ.
CWMA ಸಭೆ ಬಳಿಕ ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಾಜ್ಯ ಸರ್ಕಾರದ ಹೆಚ್ಚುವರಿ ಮುಖ್ಯಕಾರ್ಯದರ್ಶಿ ಗೌರವ್ ಗುಪ್ತಾ, CWMA ನೀಡಿದ ಆದೇಶ ಕರ್ನಾಟಕಕ್ಕೆ ಅನ್ಯಾಯವಾಗಿದೆ. CWRC ಆದೇಶವನ್ನು ಎತ್ತಿ ಹಿಡಿದಿದೆ. ತಮಿಳುನಾಡಿಗೆ ಪ್ರತಿ ದಿನ 12,000 ಕ್ಯೂಸೆಕ್ ನೀರನ್ನು ಮುಂದಿನ 15 ದಿನಗಳ ಕಾಲ ಹರಿಸಲೇಬೇಕಾದ ಅನಿವಾರ್ಯತೆ ಇದೆ ಎಂದರು.
ನಮಗೆ ಮಳೆ ಇಲ್ಲದೇ ಜಲಾಶಯದಲ್ಲಿ ಅಷ್ಟು ನೀರಿಲ್ಲ. ಪ್ರತಿದಿನ 12,000ಕ್ಯೂಸೆಲ್ ನೀಋ ಬಿಡಲು ಸಾಧ್ಯವಿಲ್ಲದ ಸ್ಥಿತಿ ಇದೆ. ಹಾಗಾಗಿ ಮುಂದಿನ ಕಾನೂನು ಹೋರಾಟದ ಬಗ್ಗೆ ತಜ್ಞರ ಜೊತೆ ಚರ್ಚಿಸುತ್ತೇವೆ. ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸುವ ಬಗ್ಗೆ ತೀರ್ಮಾನಿಸುತ್ತೇವೆ ಎಂದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ




