Kannada NewsKarnataka NewsNationalPolitics

*ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ ಪ್ರಕರಣ: ಜೈಲಧಿಕಾರಿ ಸಸ್ಪೆಂಡ್, ಎಸ್‌ಪಿಗೆ ಶೋಕಾಸ್ ನೋಟಿಸ್*

ಪ್ರಗತಿವಾಹಿನಿ ಸುದ್ದಿ: ಅತ್ಯಾಚಾರ ಪ್ರಕರಣದಲ್ಲಿ  ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ   ಪ್ರಜ್ವಲ್ ರೇವಣ್ಣ ಇರುವ ಸೆಲ್‌ನಲ್ಲಿ ಮೊಬೈಲ್ ಪತ್ತೆಯಾದ್ದು, ಪ್ರಕರಣಕ್ಕೆ ಸಂಬಂದಿಸಿ ಜೈಲುಧಿಕಾರಿಯನ್ನು ಸಸ್ಪೆಂಡ್ ಹಾಗೂ ಕಾರಣ ಕೇಳಿ ಜೈಲು ಎಸ್‌ಪಿ ಅನ್ಶುಕುಮಾರ್‌ಗೆ ಶೋಕಾಸ್ ನೋಟಿಸ್ ಜಾರಿ ಮಾಡಿ ಡಿಜಿಪಿ ಅಲೋಕ್ ಕುಮಾರ್ ಆದೇಶ ಹೊರಡಿಸಿದ್ದಾರೆ.

ಕರ್ತವ್ಯ ಲೋಪ ಹಿನ್ನೆಲೆ ಜೈಲಿನ ಅಸಿಸ್ಟೆಂಟ್ ಸೂಪರಿಂಡೆಂಟ್ ಈರಣ್ಣ ರಂಗಾಪುರ ಅನ್ನು ಸಸ್ಪೆಂಡ್ ಮಾಡಿದ್ದಾರೆ. ಪ್ರಜ್ವಲ್ ರೇವಣ್ಣ ಜೈಲಿನಲ್ಲಿ ಖೈದಿಗಳು ಧರಿಸುವ ಬಿಳಿ ಬಟ್ಟೆ ಧರಿಸ್ತಿರಲಿಲ್ಲ. ಇದೀಗ ಅಂಡ್ರಾಯ್ಡ್ ಮೊಬೈಲ್ ಸಹ ಸಿಕ್ಕಿದೆ. ಹೀಗಾಗಿ ಕರ್ತವ್ಯ ಲೋಪದ ಕಾರಣ ಕೇಳಿ ಜೈಲು ಎಸ್‌ಪಿ ಅನ್ಶುಕುಮಾರ್‌ಗೆ ಶೋಕಾಸ್ ನೋಟಿಸ್ ಜಾರಿ ಮಾಡಿದ್ದಾರೆ.

ಇದಕ್ಕೂ ಮುನ್ನ ಆ.6ರಂದು ಜೈಲಿನ ಬ್ಯಾರಕ್‌ಗಳಲ್ಲಿ ಜೈಲಿನ ಅಧಿಕಾರಿಗಳು ದಾಳಿ ನಡೆಸಿದಾಗ ಪ್ರಜ್ವಲ್ ಬಳಿ ಯಾವುದೇ ಮೊಬೈಲ್ ಪತ್ತೆಯಾಗಿರಲಿಲ್ಲ. ಹೀಗಾಗಿ ಮೊಬೈಲ್ ಯಾರು ಕೊಟ್ಟಿದ್ದು ಎನ್ನುವ ಬಗ್ಗೆ ತಿಳಿಸಬೇಕು. ಇಲ್ಲವಾದಲ್ಲಿ ಬೇರೆ ಬ್ಯಾರಕ್‌ಗೆ ಶಿಫ್ಟ್ ಮಾಡೋದಾಗಿ ಖಡಕ್ ಸೂಚನೆ ನೀಡಿದ್ದಾರೆ.

ನಾಳೆಯಿಂದ ಅದಿವೇಶನ ನಡೆಯಲಿದ್ದು, ಇದೆ ವಿಚಾರವಾಗಿ ಗದ್ದಲ ನಡೆಯುವ ಸಾಧ್ಯತೆ ಇದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button