CrimeFilm & EntertainmentKannada NewsKarnataka NewsLatest

*BREAKING: ನಟಿ ಮೇಲೆ ಅತ್ಯಾಚಾರ: ಆರೋಪಿ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಕನ್ನಡ ಚಿತ್ರರಂಗದ ನಟಿಯೊಬ್ಬರ ಮೇಲೆ ವ್ಯಕ್ತಿಯೋರ್ವ ಅತ್ಯಾಚಾರವೆಸಗಿರುವ ಘಟನೆ ಬೆಳಕಿಗೆ ಬಂದಿದೆ. ಈ ಬಗ್ಗೆ ಸಂತ್ರಸ್ತ ನಟಿ ನೀಡಿರುವ ದೂರಿನ ಮೇರೆಗೆ ಎಫ್ಐಆರ್ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ.

ಸಂತ್ರಸ್ತ ನಟಿ ಬೆಂಗಳೂರಿನ ಚಂದ್ರಾಲೇಔಟ್ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಆರೋಪದಡಿ ದೂರು ದಾಖಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಎಫ್ಐಆರ್ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯನ್ನು ಬಂಧಿಸಿ ಜೈಲಿಗಟ್ಟಿದ್ದಾರೆ. ಬಂಧಿತ ಆರೋಪಿಯನ್ನು ರಾಘವೇಂದ್ರ ಎಂದು ಗುರುತಿಸಲಾಗಿದೆ.

ಇನ್ನು ಇದೇ ಪ್ರಕರಣ ಸಂಬಂಧ ಆರೋಪಿ ರಾಘವೇಂದ್ರ ತನ್ನ ತಾಯಿಗೆ ನಟಿ ಸಹೋದರಿ ಕರೆ ಮಾಡಿ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ತಲಘಟ್ಟಪುರ ಠಾಣೆಯಲ್ಲಿ ಪ್ರತಿ ದೂರು ದಾಖಲಿಸಿದ್ದು, ಪೊಲೀಸರು ಎನ್ ಸಿಆರ್ ದಾಖಲಿಸಿಕೊಂಡಿದ್ದಾರೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button