Kannada NewsKarnataka NewsLatest

*ಕರ್ನಾಟಕದ 17 ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗಳು ರಾಷ್ಟ್ರಪತಿ ಪದಕ ಪುರಸ್ಕಾರಕ್ಕೆ ಆಯ್ಕೆ*

ಪ್ರಗತಿವಾಹಿನಿ ಸುದ್ದಿ: 80ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವಾಲಯದಿಂದ ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಹಾಗೂ ಶ್ಲಾಘನೀಯ ಸೇವೆ ಸಲ್ಲಿಸಿದ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ನೀಡಲಾಗುವ ಪ್ರತಿಷ್ಠಿತ ‘ರಾಷ್ಟ್ರಪತಿ ಪದಕ-2026’ ಪ್ರಶಸ್ತಿಯನ್ನು ಘೋಷಿಸಿದೆ. ಈ ಬಾರಿ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಒಟ್ಟು 17 ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ರಾಷ್ಟ್ರಪತಿ ಪದಕ ಪುರಸ್ಕಾರಕ್ಕೆ ಆಯ್ಕೆಯಾಗಿದ್ದಾರೆ.

ಪೊಲೀಸ್ ಪಡೆಯಲ್ಲಿ ಅತ್ಯಂತ ವಿಶಿಷ್ಟ ಹಾಗೂ ಸುದೀರ್ಘ ಸೇವೆ ಸಲ್ಲಿಸಿದ ಸಿಸಿಬಿಯ (CCB) ಸಹಾಯಕ ಪೊಲೀಸ್ ಕಮಿಷನರ್ (ACP) ಹೆಚ್.ಎನ್. ಧರ್ಮೇಂದ್ರ ಪ್ರತಿಷ್ಠಿತ ‘ರಾಷ್ಟ್ರಪತಿ ವಿಶಿಷ್ಟ ಸೇವಾ ಪದಕ’ ಗೌರವಕ್ಕೆ ಈ ಬಾರಿ ಆಯ್ಕೆಯಾಗಿದ್ದಾರೆ.

ರಾಷ್ಟ್ರಪತಿ ಪದಕಕ್ಕೆ ಆಯ್ಕೆಯಾದ ಅಧಿಕಾರಿಗಳ ಪಟ್ಟಿ:
ಸಾರಾ ಫಾತಿಮಾ – ಎಸ್ಪಿ, ರೈಲ್ವೇಸ್, ಬೆಂಗಳೂರು

ಥಾಮಸ್ ಮ್ಯಾಥ್ಯೂ – ಕಮಾಂಡೆಂಟ್, ಕೆ.ಎಸ್.ಆರ್.ಪಿ (KSRP)

ಮಹಾದೇವ್ – ಎಸಿಪಿ, ಆಗ್ನೇಯ ಸಂಚಾರ ವಿಭಾಗ, ಬೆಂಗಳೂರು

ಪರಮಾನಂದ್ – ಡಿವೈಎಸ್ಪಿ , ಡಿ.ಎ.ಆರ್ (DAR), ರಾಯಚೂರು

ಷಣ್ಮುಗವರ್ಮಾ – ಪೊಲೀಸ್ ಇನ್ಸ್‌ಪೆಕ್ಟರ್, ಪೊಲೀಸ್ ತರಬೇತಿ ಶಾಲೆ, ಮೈಸೂರು

ಭಾವುದ್ದೀನ್ ರುಕ್ಮುದ್ದೀನ್ – ಪೊಲೀಸ್ ಇನ್ಸ್‌ಪೆಕ್ಟರ್, ಮಾಳಮಾರುತಿ ಠಾಣೆ, ಬೆಳಗಾವಿ

ಗುರುಪ್ರಸಾದ್ ಗೋಪಾಲ್ ನಾಯಕ್ – ಇನ್ಸ್‌ಪೆಕ್ಟರ್, ಸಿಐಡಿ (CID)

ನಯೀಂ – ರಿಸರ್ವ್ ಪೊಲೀಸ್ ಇನ್ಸ್‌ಪೆಕ್ಟರ್ (RPI), ರಾಜಭವನ

ಶ್ರೀನಿವಾಸ – ಪಿ.ಎಸ್.ಐ, ಕೆ.ಪಿ. ಅಗ್ರಹಾರ ಠಾಣೆ, ಬೆಂಗಳೂರು

ಜ್ಞಾನದೇವ್ ನವಲ ತರಾಸೆ – ಎ.ಆರ್.ಎಸ್.ಐ (ARSI), ಕೆ.ಎಸ್.ಆರ್.ಪಿ

ಮಹದೇವಸ್ವಾಮಿ – ಹೆಡ್ ಕಾನ್ಸ್‌ಟೇಬಲ್, ವಿಧಾನಸೌಧ ಭದ್ರತೆ

ಮಾರಿಯಾ ಜೋಸೆಫ್ ದಿನೇಶ್ ಕುಮಾರ್ – ಹೆಡ್ ಕಾನ್ಸ್‌ಟೇಬಲ್, ಡಿ.ಸಿ.ಆರ್.ಇ (DCRE), ಕೆಜಿಎಫ್

ಚಂದ್ರಶೇಖರ ಚಿಕ್ಕಣ್ಣನವರ್ – ಹೆಡ್ ಕಾನ್ಸ್‌ಟೇಬಲ್, ಕೆ.ಎಸ್.ಆರ್.ಪಿ

ಅಬ್ದುಲ್ ಕಮಾಲ್ – ಹೆಡ್ ಕಾನ್ಸ್‌ಟೇಬಲ್, ತರೀಕೆರೆ ಠಾಣೆ

ನಾಗೇಶ್ ಮಚ್ಚಯ್ಯ – ಹೆಡ್ ಕಾನ್ಸ್‌ಟೇಬಲ್, ಸಿಐಡಿ (CID)

ಮನೋಹರ್ – ಪೊಲೀಸ್ ಕಾನ್ಸ್‌ಟೇಬಲ್, ಹುಣಸೂರು ಠಾಣೆ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button