EducationKannada NewsKarnataka NewsLatest

*ನೂತನ ಪ್ರಾಂಶುಪಾಲರಾಗಿ ಡಾ. ಎಂ. ಎಸ್. ಪಾಟೀಲ ಅಧಿಕಾರ ಸ್ವೀಕಾರ*

ಬೆಳಗಾವಿಯ ‘ಅನುವರ್ತಿಕ್ ಮಿರ್ಜಿ ಭರತೇಶ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ’ (AMBIT) ಇಂಜಿನಿಯರಿಂಗ್ ಕಾಲೇಜಿನ ನೂತನ ಪ್ರಾಂಶುಪಾಲರಾಗಿ ಡಾ. ಎಂ. ಎಸ್. ಪಾಟೀಲ ಅಧಿಕಾರ ಸ್ವೀಕಾರ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : : ಪ್ರತಿಷ್ಠಿತ ಭಾರತೇಶ ಎಜುಕೇಶನ್ ಟ್ರಸ್ಟ್‌ನ ಆಶ್ರಯದಲ್ಲಿ ಮುನ್ನಡೆಯುತ್ತಿರುವ, ಬೆಳಗಾವಿಯ ಪ್ರಮುಖ ತಾಂತ್ರಿಕ ಶಿಕ್ಷಣ ಸಂಸ್ಥೆಯಾದ ‘ಅನುವರ್ತಿಕ್ ಮಿರ್ಜಿ ಭರತೇಶ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ’ (AMBIT) ನೂತನ ಪ್ರಾಂಶುಪಾಲರಾಗಿ  ಶಿಕ್ಷಣ ತಜ್ಞ ಹಾಗೂ ಸಂಶೋಧಕ ಡಾ. ಎಂ. ಎಸ್. ಪಾಟೀಲ ಅವರು ಅಧಿಕಾರ ಸ್ವೀಕರಿಸಿದ್ದಾರೆ.

Home add -Advt

ಶಶಾಂಕ ಲೇಂಗಡೆ ಮತ್ತು ನಿಕಟಪೂರ್ವ ಪ್ರಾಚಾರ್ಯೆ ಡಾ.ವೀಣಾ ಕರ್ಚಿ ನೂತನ ಪ್ರಾಚಾರ್ಯರನ್ನು ಸ್ವಾಗತಿಸಿದರು.

ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ (NIT) ಕ್ಯಾಲಿಕಟ್‌ನಿಂದ ಡಾಕ್ಟರೇಟ್ (ಪಿಎಚ್.ಡಿ) ಪದವಿ ಪಡೆದಿರುವ ಡಾ. ಎಂ. ಎಸ್. ಪಾಟೀಲ ಅವರು, ಉದ್ಯಮ, ಬೋಧನೆ ಹಾಗೂ ಶೈಕ್ಷಣಿಕ ಆಡಳಿತ ವಿಭಾಗಗಳಲ್ಲಿ ಸುಮಾರು 30 ಕ್ಕೂ ಹೆಚ್ಚು ವರ್ಷಗಳ ಅಪಾರ ಅನುಭವ ಹೊಂದಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸಂಸ್ಥೆಯಲ್ಲಿ ಗುಣಮಟ್ಟದ ತಾಂತ್ರಿಕ ಶಿಕ್ಷಣವನ್ನು ಬಲಪಡಿಸುವುದು, ಸಂಶೋಧನಾ ವಾತಾವರಣವನ್ನು ಉತ್ತೇಜಿಸುವುದು ಹಾಗೂ ವಿದ್ಯಾರ್ಥಿಗಳಲ್ಲಿ ಉದ್ಯಮಗಳಿಗೆ ಪೂರಕವಾದ ಕೌಶಲ್ಯಗಳನ್ನು ಅಭಿವೃದ್ಧಿಪಡಿಸಲು ತಾವು ಬದ್ಧರಾಗಿರುವುದಾಗಿ ತಿಳಿಸಿದರು.

ಸಂಸ್ಥೆಯಲ್ಲಿ ಲಭ್ಯವಿರುವ ಕೋರ್ಸ್‌ಗಳು: ಪ್ರಸ್ತುತ ‘ಎ ಎಮ್ ಬಿ ಐ ಟಿ ‘ (AMBIT) ಸಂಸ್ಥೆಯು   ಇಂಜಿನಿಯರಿಂಗ್ ಪದವಿ ಹಂತದಲ್ಲಿ:

• ಕಂಪ್ಯೂಟರ್ ಸೈನ್ಸ್ ಅಂಡ್ ಇಂಜಿನಿಯರಿಂಗ್ (CSE)

• ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಅಂಡ್ ಮೆಷಿನ್ ಲರ್ನಿಂಗ್ (AIML)

• ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯುನಿಕೇಶನ್ ಇಂಜಿನಿಯರಿಂಗ್ (ECE)

ಹಾಗೂ ಸ್ನಾತಕೋತ್ತರ ಹಂತದಲ್ಲಿ ಮಾಸ್ಟರ್ ಆಫ್ ಕಂಪ್ಯೂಟರ್ ಅಪ್ಲಿಕೇಶನ್ಸ್ (MCA) ಕೋರ್ಸ್‌ಗಳನ್ನು ನಡೆಸುತ್ತಿದೆ.

ಡಾ. ಎಂ. ಎಸ್. ಪಾಟೀಲ ಅವರ ಸಮರ್ಥ ನೇತೃತ್ವದಲ್ಲಿ ಸಂಸ್ಥೆಯು ಶೈಕ್ಷಣಿಕ ಕ್ಷೇತ್ರದಲ್ಲಿ ಮತ್ತಷ್ಟು ಉನ್ನತ ಸಾಧನೆ ಮಾಡಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿರುವ ಭರತೇಶ ಎಜುಕೇಶನ್ ಟ್ರಸ್ಟ್‌ನ ಆಡಳಿತ ಮಂಡಳಿ,  ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಅವರನ್ನು ಹೃತ್ಪೂರ್ವಕವಾಗಿ ಸ್ವಾಗತಿಸಿ ಶುಭ ಹಾರೈಸಿದರು.

Related Articles

Back to top button