Belagavi NewsBelgaum NewsKannada NewsKarnataka News

*ರಾಜ್ಯದ ಹಲವೆಡೆ ಹಗುರದಿಂದ ಸಾಧಾರಣ ಮಳೆ*

ಪ್ರಗತಿವಾಹಿನಿ ಸುದ್ದಿ : ರಾಜ್ಯದಲ್ಲಿ ಮುಂಗಾರು ಮಳೆ ಮುಂದುವರಿದಿದ್ದು ಮುಂಬರುವ ದಿನಗಳಲ್ಲಿ ಹಲವೆಡೆ ಹಗುರದಿಂದ ಸಾಧಾರಣ ಪ್ರಮಾಣದ ಮಳೆಯಾಗುವ ಸಾಧ್ಯತೆಯಿದೆ. 

ಈಗಾಗಲೇ ಚಿಕ್ಕಮಗಳೂರು, ಶಿವಮೊಗ್ಗ ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುತ್ತಿದೆ.  ಜೊತೆಗೆ ತುಮಕೂರು, ಮೈಸೂರು, ಚಿಕ್ಕಬಳ್ಳಾಪುರ, ಕೋಲಾರದಲ್ಲಿ ಹಗುರ ಮಳೆಯಾಗಿದ್ದು, ರಾಜಧಾನಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಮುಂದುವರೆಯಲಿದೆ.

Home add -Advt

ರಾಜ್ಯದ ಕರಾವಳಿ ಹಾಗೂ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಕೆಲವು ಭಾಗಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ತಾಪಮಾನದಲ್ಲಿಯೂ ಹೆಚ್ಚಿನ ವ್ಯತ್ಯಾಸ ಕಂಡುಬರುವುದಿಲ್ಲ.

ಕರಾವಳಿ ಭಾಗಗಳಲ್ಲಿ ಬಿರುಗಾಳಿಯೊಂದಿಗೆ ಮಳೆಯಾಗುವ ಮುನ್ನೆಚ್ಚರಿಕೆಯನ್ನು ನೀಡಲಾಗಿದ್ದು, ಮೀನುಗಾರರು ಮತ್ತು ಕರಾವಳಿ ನಿವಾಸಿಗಳು ಜಾಗರೂಕರಾಗಿರಲು ಸೂಚಿಸಲಾಗಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ದಕ್ಷಿಣ ಮತ್ತು ಉತ್ತರ ಒಳನಾಡಿನ ಹಲವು ಪ್ರದೇಶಗಳಲ್ಲಿ ಸಂಜೆ ಅಥವಾ ರಾತ್ರಿಯ ವೇಳೆಗೆ ಸಾಧಾರಣ ಮಳೆಯಾಗಬಹುದು.

Related Articles

Back to top button