Kannada NewsKarnataka NewsPolitics

*ಗುಟ್ಕಾ ಹಾಗೂ ಪಾನ್ ಮಸಾಲ ನಿಷೇಧ ಆದೇಶ ಹಿಂಪಡೆಯುವ ಪ್ರಶ್ನೆಯೇ ಇಲ್ಲ: ಖಾದರ್*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ನಿಕೋಟಿನ್ ಯುಕ್ತ ಗುಟ್ಕಾ ಹಾಗೂ ಪಾನ್ ಮಸಾಲ  ನಿಷೇಧಿಸಿ ಹೊರಡಿಸಲಾಗಿರುವ ಆದೇಶವನ್ನು ರದ್ದುಗೊಳಿಸಿಲ್ಲ ಎನ್ನುವ ಮೂಲಕ ಆರೋಗ್ಯ ಸಚಿವ ಯು.ಟಿ. ಖಾದರ್ ಎಲ್ಲಾ ಗೊಂದಲಗಳಿಗೂ ತೆರೆ ಎಳೆದಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಯುಟಿ ಖಾದರ್, ಪಾನ್ ಮಸಾಲ ನಿಷೇಧದಿಂದ ಅಡಿಕೆ ಬೆಳೆಗಾರರ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ಹೊರಡಿಸಲಾದ ಈ ಆದೇಶ ಹಿಂಪಡೆಯುವ ಪ್ರಶ್ನೆಯೇ ಇಲ್ಲ ಎಂದರು

Home add -Advt

 ಪಾನ್ ಮಸಾಲಾದಲ್ಲಿ ನಿಕೋಟಿನ್ ಇರಬಾರದು ಎಂಬ ಆದೇಶ ಜನರ ಆರೋಗ್ಯದ ಹಿತದೃಷ್ಟಿಯಿಂದ ಮಾಡಲಾಗಿದೆ. ಅಡಿಕೆಗೆ ಯಾವುದೇ ತೊಂದರೆ ಇಲ್ಲ. ನಮ್ಮ ಇಲಾಖೆ ಮತ್ತು ಸರ್ಕಾರ ಅಡಿಕೆ ಬೆಳೆಗಾರರಿಗೆ, ರೈತರಿಗೆ, ವ್ಯಾಪಾರಿಗಳಿಗೆ ಸಂಪೂರ್ಣ ಬೆಂಬಲ, ಪ್ರೋತ್ಸಾಹ ನೀಡುತ್ತದೆ ಎಂದು ಹೇಳಿದ್ದಾರೆ.

ಅಡಿಕೆ ಬೆಳೆಗಾರರಿಗೆ ತೊಂದರೆ ಕೊಡುವ ಕೆಲಸ ಹಿಂದೆಯೂ ಮಾಡಿಲ್ಲ, ಈಗಲೂ ಮಾಡಲ್ವ, ಮುಂದೆಯೂ ಮಾಡಲ್ಲ. ಅಡಿಕೆ ಬೆಳೆಗಾರರಿಗೆ ಹಾಗೂ ವ್ಯಾಪಾರಿಗಳಿಗೆ ಈ ತೀರ್ಮಾನದಿಂದ ಬೆಲೆ ಹೆಚ್ಚಾಗುತ್ತದೆ.

ಗುಟ್ಕಾಗೆ ನಮ್ಮ ದೇಶದ ಅಡಿಕೆಯನ್ನು ಯಾರೂ ಬಳಕೆ ಮಾಡುವುದಿಲ್ಲ. ನೇಪಾಳ, ಬಾಂಗ್ಲಾದೇಶದಿಂದ ಆಮದು ಮಾಡಿ ಬಳಕೆ ಮಾಡುತ್ತಾರೆ. ಗುಟ್ಕಾ ನಿಕೊಟಿನ್ ನಿಷೇಧದಿಂದ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ. ಅಡಿಕೆ ಬೆಲೆ ಕುಸಿತ ಆಗುವುದಿಲ್ಲ ಎಂದಿದ್ದೆವು. ಮೂರು ತಿಂಗಳ ಬಳಿಕ ಅಡಿಕೆ ಬೆಲೆ ಹೆಚ್ಚಾಗಿತ್ತು. ಹಾಗಾಗಿ ಪಾನ್ ಮಸಾಲದಲ್ಲಿ ನಿಕೋಟಿನ್ ಇರಬಾರದು ಎಂಬ ತೀರ್ಮಾನದಿಂದ ಅಡಿಕೆ ಬೆಳೆಗಾರರಿಗೆ ಯಾವುದೇ ಸಮಸ್ಯೆ ಇಲ್ಲ ಎಂದಿದ್ದಾರೆ.

ಅಡಿಕೆ ವ್ಯಾಪಾರಿಗಳಿಗೂ ಯಾವುದೇ ತೊಂದರೆ ಇಲ್ಲ. ಮೂರು ತಿಂಗಳು ಸಮಯಾವಕಾಶ ಕೊಟ್ಟು ನೋಡಿ. ಸಿಎಂ ಅವರು ಈ ಬಗ್ಗೆ ಚರ್ಚೆ ಮಾಡಿದ್ದು, ಇದರ ಬಗ್ಗೆ ಸ್ಪಷ್ಟನೆ ನೀಡಿದ್ದೇನೆ. ಆರೋಗ್ಯ ದೃಷ್ಟಿಯಿಂದ ಇದು ಉತ್ತಮ ತೀರ್ಮಾನ ಅಂದಿದ್ದಾರೆ.

Related Articles

Back to top button