Kannada NewsLatestNational

*ಕರ್ನಾಟಕಕ್ಕೆ ಸುಪ್ರೀಂ ಕೋರ್ಟ್ ನಲ್ಲೂ ಬಿಗ್ ಶಾಕ್*

ಪ್ರಗತಿವಾಹಿನಿ ಸುದ್ದಿ: ಕಾವೇರಿ ನದಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ನೀಡಿದ್ದ ಆದೇಶವನ್ನು ಸುಪ್ರೀ ಕೋರ್ಟ್ ಎತ್ತಿ ಹಿಡಿದಿದೆ.

Home add -Advt

15 ದಿನಗಳ ಕಾಲ ಪ್ರತಿದಿನ 12 ಸಾವಿರ ಕ್ಯೂಸೆಕ್ ನಂತೆ ತಮಿಳುನಾಡಿಗೆ ನೀರು ಹರಿಸುವಂತೆ CWMA ನೀಡಿದ್ದ ನಿರ್ದೇಶನವನ್ನು ಪಾಲಿಸುವಂತೆ ಸುಪ್ರೀಂ ಕೋರ್ಟ್ ಕರ್ನಾಟಕ ಸರ್ಕಾರಕ್ಕೆ ಸೂಚನೆ ನೀಡಿದೆ. ಈ ಮೂಲಕ ಮಳೆಯಿಲ್ಲದೇ ನೀರಿನ ಕೊರತೆ ಅನುಭವಿಸುತ್ತಿರುವ ಕರ್ನಾಟಕಕ್ಕೆ ಮತ್ತೊಂದು ಆಘಾತ ನೀಡಿದಂತಾಗಿದೆ.

ತಮಿಳುನಾಡು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ, CWMA ಆದೇಶ ಪಾಲಿಸುವಂತೆ ಕರ್ನಾಟಕಕ್ಕೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ಮುಂದಿನ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಲಾಗಿದೆ.

ಕಾವೇರಿ ಕೊಳ್ಳದಲ್ಲಿ ನೀರಿಲ್ಲದಿದ್ದರೂ ಸುಪ್ರೀಂ ಕೋರ್ಟ್ ನಲ್ಲಿಯೂ ಕರ್ನಾಟಕ್ಕೆ ಹಿನ್ನಡೆಯಾಗಿದ್ದು, ಮತ್ತೆ ಕಾವೇರಿ ನೀರು ತಮಿಳುನಾಡಿಗೆ ಹರಿಸುವಂತೆ ಸೂಚಿಸಿರುವುದು ಕರ್ನಾಟಕಕ್ಕೆ ಮರಣ ಶಾಸನವಾಗಿದೆ. ರಾಜ್ಯ ಸರ್ಕಾರದ ಸಮರ್ಪಕ ವಾದ ಮಂಡನೆ ಮಾಡುವಲ್ಲಿ ವ್ಫಲವಾಗಿದೆ. ನಿಜಕ್ಕೂ ರಾಜ್ಯ ಸರ್ಕಾರಕ್ಕೆ ರೈತರ ಬಗ್ಗೆಯಾಗಲಿ, ಜನರ ಬಗ್ಗೆಯಾಗಲಿ ಕಿಂಚಿತ್ತೂ ಕಾಲಜಿ ಇಲ್ಲ ಎಂಬುದಕ್ಕೆ ಇದೇ ಸಾಕ್ಷಿ ಎಂದು ಮಂದ್ಯ ಭಾಗದ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುಪ್ರೀಂ ಕೋರ್ಟ್ ಆದೇಶದ ಬೆನ್ನಲ್ಲೇ ಮತ್ತೆ ಕಾವೇರಿ ಕೊಳ್ಳದಲ್ಲಿ ಪ್ರತಿಭಟನೆಗಳು ಆರಂಭವಾಗಿವೆ.

Related Articles

Back to top button