Kannada NewsKarnataka NewsLatestNational

*ಕೇಂದ್ರ ಆರೋಗ್ಯ ಸಚಿವರಿಗೆ ಅನಾರೋಗ್ಯ*: *ನಡ್ಡಾ ಅವರಿಗೆ ಆಂಜಿಯೋಪ್ಲಾಸ್ಟಿ*


ಕೇಂದ್ರ ಆರೋಗ್ಯ ಸಚಿವ ಜೆ.ಪಿ.ನಡ್ಡಾ ಅವರಿಗೆ ಆಂಜಿಯೋಪ್ಲಾಸ್ಟಿ
ಆರೋಗ್ಯ ಸ್ಥಿರ: AIIMS ನಲ್ಲಿ ತಜ್ಞರ ಮೇಲ್ವಿಚಾರಣೆ

Home add -Advt

ಪ್ರಗತಿವಾಹಿನಿ ಸುದ್ದಿ, ನವದೆಹಲಿ : ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಜೆ.ಪಿ.ನಡ್ಡಾ ಅವರಿಗೆ ಆಂಜಿಯೋಪ್ಲಾಸ್ಟಿ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ನಡೆದಿದೆ. ಸದ್ಯ ಅವರ ಆರೋಗ್ಯ ಸ್ಥಿರವಾಗಿದ್ದು, ವೈದ್ಯರ ಮೇಲ್ವಿಚಾರಣೆಯಲ್ಲಿದ್ದಾರೆ.

AIIMS ದೆಹಲಿ ಬಿಡುಗಡೆ ಮಾಡಿರುವ ಪ್ರೆಸ್ ರಿಲೀಸ್ ಪ್ರಕಾರ, ಸಚಿವ ನಡ್ಡಾ ಅವರು ಆಗಸ್ಟ್ 17, 2026 ರಂದು ಆಂಜಿಯೋಪ್ಲಾಸ್ಟಿಗೆ ಒಳಗಾಗಿದ್ದಾರೆ. ಸದ್ಯ ಅವರು AIIMS ನ ಹೃದ್ರೋಗ ವಿಭಾಗದಲ್ಲಿ ತಜ್ಞ ವೈದ್ಯರ ಮೇಲ್ವಿಚಾರಣೆಯಲ್ಲಿ ಇದ್ದಾರೆ ಮತ್ತು ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆ ತಿಳಿಸಿದೆ.

ಈ ಮಾಹಿತಿಯನ್ನು AIIMS ನ ಮಾಧ್ಯಮ ವಿಭಾಗದ ಉಸ್ತುವಾರಿ ಡಾ. ರಿಮಾ ದಾದಾ ಅವರು ಇಂದು ಬಿಡುಗಡೆ ಮಾಡಿದ್ದಾರೆ.


Related Articles

Back to top button