Kannada NewsKarnataka NewsNational

*ಪ್ರಸಿದ್ಧ ಹೊಟೆಲ್‌ನಲ್ಲಿ ಬೆಂಕಿ ಅವಘಡ: 9 ಜನ ಸಜೀವ ದಹನ*

ಪ್ರಗತಿವಾಹಿನಿ ಸುದ್ದಿ: ಪ್ರಸಿದ್ಧ ಹೋಟೆಲ್ ಒಂದರಲ್ಲಿ ಇಂದು ಬೆಳ್ಳಂಬೆಳಗ್ಗೆ ಬೆಂಕಿ ಹೊತ್ತಿಕೊಂಡು, ಮಗು ಸೇರಿದಂತೆ ಒಂಬತ್ತು ಮಂದಿ ಸಜೀವ ದಹನವಾಗಿರುವ ಘಟನೆ ನಡೆದಿದೆ.

Home add -Advt

ದುರ್ಘಟನೆಯಲ್ಲಿ ಹಲವರು ಗಂಭೀರವಾಗಿ ಗಾಯಗೊಂಡಿದ್ದು, ತಕ್ಷಣವೇ ಅವರನ್ನು ಹತ್ತಿರದ ಆಸ್ಪತ್ರೆಗಳಿಗೆ ದಾಖಲಿಸಿ ತುರ್ತು ಚಿಕಿತ್ಸೆ ನೀಡಲಾಗುತ್ತಿದೆ.

ಪಶ್ಚಿಮ ಬಂಗಾಳದ ರಾಜಧಾನಿ ಕೋಲ್ಕತ್ತಾದ ಮಿರ್ಜಾ ಗಾಲಿಬ್ ಸ್ಟ್ರೀಟ್‌ನಲ್ಲಿರುವ ಹೋಟ್ ನಲ್ಲಿ ಈ ಭೀಕರ ದುರಂತ ಸಂಭವಿಸಿದೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಅಗ್ನಿಶಾಮಕ ದಳದ 4 ವಾಹನಗಳು ತಕ್ಷಣ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ಕೈಗೊಂಡವು.

ಹೋಟೆಲ್‌ನ ಕೊಠಡಿಗಳಲ್ಲಿ ಮತ್ತು ಹೊಗೆಯ ದಟ್ಟಣೆಯಲ್ಲಿ ಸಿಲುಕಿಕೊಂಡಿದ್ದ ಹಲವು ಪ್ರವಾಸಿಗರು ಹಾಗೂ ಸಿಬ್ಬಂದಿಯನ್ನು ಅಗ್ನಿಶಾಮಕ ಸಿಬ್ಬಂದಿ ಸಮಯಪ್ರಜ್ಞೆಯಿಂದ ರಕ್ಷಿಸಿ ಆಸ್ಪತ್ರೆಗೆ ರವಾನಿಸಿದ್ದಾರೆ.

ಹೋಟೆಲ್‌ನಲ್ಲಿ ಸಂಭವಿಸಿದ ಶಾರ್ಟ್ ಸರ್ಕ್ಯೂಟ್‌ನಿಂದಾಗಿಯೇ ಈ ಅಗ್ನಿ ಅವಘಡ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ. ಆದಾಗ್ಯೂ ಬೆಂಕಿ ಅವಘಡಕ್ಕೆ ನಿಖರವಾದ ಕಾರಣ ಏನು ಎಂಬುದು ಇನ್ನೂ ಖಚಿತವಾಗಿಲ್ಲ. ಸ್ಥಳೀಯ ಪೊಲೀಸರು ಹಾಗೂ ವಿಧಿವಿಜ್ಞಾನ ತಜ್ಞರ ತಂಡ ಸ್ಥಳಕ್ಕೆ ಭೇಟಿ ನೀಡಿ ತನಿಖೆ ಮುಂದುವರಿಸಿದೆ.

Related Articles

Back to top button