Belagavi NewsBelgaum NewsKannada NewsKarnataka News

*ಮಳೆ ಜೊತೆ ಬಲವಾದ ಗಾಳಿಯೂ ಬೀಸಲಿದೆ: ಹವಾಮಾನ ಇಲಾಖೆ ಸೂಚನೆ*

ಪ್ರಗತಿವಾಹಿನಿ ಸುದ್ದಿ: ಮುಂದಿನ ಕೆಲವು ದಿನಗಳ ಕಾಲ ರಾಜ್ಯಾದ್ಯಂತ ಬಿರುಗಾಳಿ ಸಹಿತ ಉತ್ತಮ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಬಲವಾದ ಗಾಳಿ ಬೀಸಲಿದ್ದು ಸಾರ್ವಜನಿಕರು ಹಾಗೂ ಮೀನುಗಾರರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಸಾಧಾರಣದಿಂದ ಭಾರಿ ಮಳೆಯಾಗುವ ನಿರೀಕ್ಷೆಯಿದೆ. 

Home add -Advt

ಈ ಪ್ರದೇಶಗಳಲ್ಲಿ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಬಲವಾದ ಗಾಳಿ ಬೀಸಲಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಹವಾಮಾನ ಇಲಾಖೆಯು ‘ಯೆಲ್ಲೋ ಅಲರ್ಟ್’ ಘೋಷಿಸಿದೆ.

ಮಲೆನಾಡಿನ ಭಾಗಗಳಾದ ಶಿವಮೊಗ್ಗ ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲೂ ಸಹ ಬಿರುಗಾಳಿ ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. 

ರಾಜ್ಯದ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಧಾರವಾಡ, ಹಾವೇರಿ, ಮೈಸೂರು, ಮಂಡ್ಯ ದಾವಣಗೆರೆ ಸೇರಿದಂತೆ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗಲಿದೆ. ರಾಜಧಾನಿ ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ಮುಂದುವರಿಯಲಿದ್ದು, ಮಳೆ ಬಿಳುವ ನಿರೀಕ್ಷೆಯಿದೆ. 

Related Articles

Back to top button