Kannada NewsKarnataka NewsLatest
*ತೆರೆದ ಬಾವಿಗೆ ಬಿದ್ದು ಇಬ್ಬರು ಮಕ್ಕಳು ಸಾವು; ಅವರನ್ನು ರಕ್ಷಿಸಲು ಹೋದ ತಂದೆ ನಾಪತ್ತೆ*

ಪ್ರಗತಿವಾಹಿನಿ ಸುದ್ದಿ: ಕಾಲು ಜಾರಿ ತೆರೆದ ಬಾವಿಗೆ ಬಿದ್ದ ಇಬ್ಬರು ಮಕ್ಕಳನ್ನು ರಕ್ಷಿಸಲು ಹೋಗಿ ತಂದೆಯೂ ನಾಅಪತ್ತೆಯಾಗಿರುವ ಘಟನೆ ನಡೆದಿದೆ.
ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಬಳಬಟ್ಟಿ ಗ್ರಾಮದ ತೋಟದ ಮನೆಯಲ್ಲಿ ಈ ದುರಂತ ಸಂಭವಿಸಿದೆ. ಇಬ್ಬರು ಬಾಲಕಿಯರು ಆಕಸ್ಮಿಕವಾಗಿ ಕಾಲು ಜಾರಿ ತೆರೆದ ಬಾವಿಗೆ ಬಿದ್ದಿದ್ದು ಇಬ್ಬರೂ ಮೃತಪಟ್ಟಿದ್ದಾರೆ. ಮಕ್ಕಳ ರಕ್ಷಣೆಗೆಂದು ಬಾವಿಗೆ ಜಿಗಿದ ತಂದೆ ನಾಪತ್ತೆಯಾಗಿದ್ದಾರೆ.
ಸಾಕ್ಷಿ ( 15 ), ರಕ್ಷಿತಾ ( 10 ) ಮೃತ ಬಾಲಕಿಯರು. ಇವರನ್ನು ರಕ್ಷಿಸಲು ತಂದೆ ಸಾಬಣ್ಣ ( 40 ) ಬಾವಿಗೆ ಜಿಗದು ಕಣ್ಮರೆಯಾಗಿದ್ದಾರೆ. ಸಾಬಣ್ಣ ಅವರಿಗೆ ಈಜು ಬರುತ್ತಿರಲಿಲ್ಲ ಎಂದು ತಿಳಿದುಬಂದಿದೆ.
ತೆಪ್ಪದ ಮೂಖಾಂತರ ಗ್ರಾಮಸ್ಥರು ಶೋಧ ಕಾರ್ಯ ನಡೆಸುತ್ತಿದ್ದಾರೆ. ಇಬ್ಬರು ಮಕ್ಕಳ ಮೃತದೇಹ ಪತ್ತೆಯಾಗಿದ್ದು, ಸಾಬಣ್ಣ ಅವರಿಗಾಗಿ ಶೋಧ ಕಾರ್ಯ ಮುಂದುವರೆದಿದೆ. ನಿಡಗುಂದಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.




