Karnataka NewsLatestPolitics
*ಸಿಎಂ ಡಿ.ಕೆ.ಶಿವಕುಮಾರ್ ನಿವಾಸಕ್ಕೆ ಭೇಟಿ ನೀಡಿದ ಉದ್ಯಮಿ ಗೌತಮ್ ಅದಾನಿ*

ಪ್ರಗತಿವಾಹಿನಿ ಸುದ್ದಿ: ಅದಾನಿ ಸಮೂಹ ಸಂಸ್ಥೆಗಳ ಅಧ್ಯಕ್ಷ ಗೌತಮ್ ಅದಾನಿ ಇಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿರುವುದು ತೀವ್ರ ಕುತೂಹಲ ಮೂಡಿಸಿದೆ.
ಬೆಂಗಳೂರಿನ ಸದಾಶಿವನಗರದಲ್ಲಿರುವ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಿವಾಸಕ್ಕೆ ಗೌತಮ್ ಅದಾನಿ ಭೇಟಿ ನೀಡಿದ್ದು, ಸಿಎಂ ಡಿ.ಕೆ.ಶಿವಕುಮಾರ್ ಅವರೊಂದಿಗೆ ಕೆಲ ಕಾಲ ಮಾತುಕತೆ ನಡೆಸಿದರು.
ರಾಜ್ಯದಲ್ಲಿ ಉದ್ದಿಮೆ ಅವಕಾಶಗಳ ಜತೆಗೆ, ಬಹುನಿರೀಕ್ಷಿತ ಬೆಂಗಳೂರು ಸುರಂಗ ರಸ್ತೆ ಯೋಜನೆ ಗುತ್ತಿಗೆ ಹಂಚಿಕೆಗೆ ಸಂಬಂಧಿಸಿದಂತೆ ಇಬ್ಬರ ನಡುವೆ ಮಹತ್ವದ ಚರ್ಚೆ ನಡೆದಿದೆ ಎನ್ನಲಾಗಿದೆ.




