Kannada NewsKarnataka NewsLatest

*ಭೀಕರ ಅಪಘಾತ: ಮೂವರು ಸ್ಥಳದಲ್ಲೇ ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ವಿದ್ಯುತ್ ಕಂಬಕ್ಕೆ ಬೊಲೆರೊ ವಾಹನ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ.

ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಮಡ್ನಾಳ ಬಳಿ ಈ ದುರಂತ ಸಂಭವಿಸಿದೆ. ಬೊಲೆರೊ ವಾಹನದಲ್ಲಿ ಕೂಲಿ ಕೆಲಸಕ್ಕೆ ತೆರಳುತ್ತಿದ್ದರು. ಈ ವೇಳೆ ಅಪಘಾತ ಸಂಭವಿಸಿದೆ. ಮೃತರನ್ನು ಭಾಗ್ಯಶ್ರೀ(35), ಸತ್ಯಮ್ಮ(30) ಮತ್ತು ಹೊನ್ನಿಂಗಮ್ಮ(18) ಎಂದು ಗುರುತಿಸಲಾಗಿದೆ.

Home add -Advt

ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೊಲೆರೋ ಡಿಕ್ಕಿಯಾಗಿದೆ ಎನ್ನಲಾಗಿದ್ದು, 8 ಕೂಲಿ ಕಾರ್ಮಿಕರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಭೀಮರಾಯನಗುಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Related Articles

Back to top button