*ಇಂದು SIR ಮೊದಲ ಕರಡು ಮತದಾರರ ಪಟ್ಟಿ ಪ್ರಕಟ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಮೊದಲ ಕರಡು ಮತದಾರರ ಪಟ್ಟಿಯನ್ನು ಇಂದು ಪ್ರಕಟವಾಗಲಿದೆ.
ರಾಜ್ಯ ಮುಖ್ಯ ಚುನಾವಣಾ ಆಯುಕ್ತ ವಿ. ಅನ್ಬುಕುಮಾರ್ ನೇತೃತ್ವದಲ್ಲಿ ಈ ಕರಡು ಪಟ್ಟಿಯನ್ನು ಬಿಡುಗಡೆ ಮಾಡಲಾಗುತ್ತಿದ್ದು, ರಾಜ್ಯದ ಮತದಾರರ ಪಟ್ಟಿಯಲ್ಲಿ ಯಾರ ಹೆಸರು ಇರಲಿದೆ ಯಾರ ಹೆಸರು ಇರುವುದಿಲ್ಲ ಎಂಬುದು ಬಹಿರಂಗಗೊಳ್ಳಲಿದೆ.
ಕರಡು ಪಟ್ಟಿ ಪ್ರಕಟವಾದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ಆಕ್ಷೇಪಣೆ ಮತ್ತು ತಿದ್ದುಪಡಿಗಳಿಗೆ ಅವಕಾಶ ನೀಡಿದೆ. ಇದರ ಒಂದು ಭಾಗವಾಗಿ, ಲಕ್ಷಾಂತರ ಮತದಾರರಿಗೆ ಚುನಾವಣಾ ನೋಂದಣಿ ಅಧಿಕಾರಿಗಳು (ERO) ನೋಟಿಸ್ ನೀಡಲಿದ್ದಾರೆ. EROಗಳು ಮತದಾರರ ಮನೆಗಳಿಗೆ ತೆರಳಿ ನೋಟಿಸ್‌ಗಳನ್ನು ಹಸ್ತಾಂತರಿಸಲಿದ್ದಾರೆ.
ಈಗಾಗಲೇ ಡಿಜಿಟಲೀಕರಣಗೊಂಡ 4.44 ಕೋಟಿ ಮತದಾರರ ಪೈಕಿ ಸುಮಾರು 43,80,740 ಮತದಾರರಿಗೆ ನೋಟಿಸ್ ನೀಡುವ ಸಾಧ್ಯತೆಯಿದೆ. ಆಗಸ್ಟ್ 27ರಿಂದ ಮತದಾರರಿಗೆ ನೋಟಿಸ್ ನೀಡಲು ಆಯೋಗ ಸಿದ್ಧತೆ ನಡೆಸುತ್ತಿದೆ. ಈ ಕ್ರಮವು ಮತದಾರರ ಪಟ್ಟಿಯಲ್ಲಿನ ದೋಷಗಳನ್ನು ಸರಿಪಡಿಸಲು ಮತ್ತು ಪಾರದರ್ಶಕತೆಯನ್ನು ಖಚಿತಪಡಿಸಿಕೊಳ್ಳಲು ಸಹಕಾರಿಯಾಗಲಿದೆ.




