Kannada NewsKarnataka NewsLatest

*KPSC ಕಚೇರಿ ಮೇಲೆ ಸಿಐಡಿ ಅಧಿಕಾರಿಗಳ ದಾಳಿ*

ಪ್ರಗತಿವಾಹಿನಿ ಸುದ್ದಿ: ಕೆಪಿಎಸ್ ಸಿ ನಡೆಸಿದ್ದ ಪಶುವೈದ್ಯಾಧಿಕಾರಿಗಳ ನೇಮಕಾತಿ ಪರೀಕ್ಷಾ ಅಕ್ರಮಕ್ಕೆ ಸಂಬಂಧಿಸಿದಂತೆ ಕೆಪಿಎಸ್ ಸಿ ಕಚೇರಿ ಮೇಲೆ ಸಿಐಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಕೆಪಿಎಸ್ ಸಿ ಹಗರಣ ಸಂಬಂಧ ಒಂದೆಡೆ ಇಡಿ ಅದಿಕಾರಿಗಳ ದಾಳಿ, ತನಿಖೆ ಮುಂದುವರೆದಿರುವ ಬೆನ್ನಲ್ಲೇ ಸಿಐಡಿ ತನಿಖೆ ಕೂಡ ಪ್ರಾರಂಭಗೊಂಡಿದೆ. ಕೆಪಿಎಸ್ ಸಿ ಹಗರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ಆದೇಶ ನೀಡಿತ್ತು.

Home add -Advt

ಈ ಹಿನ್ನೆಲೆಯಲ್ಲಿ ಸಿಐಡಿ ಎಸ್ ಪಿ ರಾಘವೇಂದ್ರ ಹೆಗ್ಡೆ ನೇತೃತ್ವದಲ್ಲಿ ಸಿಐಡಿ ಅಧಿಕಾರಿಗಳು ಬೆಂಗಳೂರಿನ ಕೆಪಿಎಸ್ ಸಿ ಕೇಂದ್ರ ಕಚೇರಿ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಎಲ್ಲ 329 ಅಭ್ಯರ್ಥಿಗಳಿಗೆ ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ.

Related Articles

Back to top button