Karnataka NewsLatestPolitics
*ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಬಂಧನ ವಾರಂಟ್ ಜಾರಿ*

ಪ್ರಗತಿವಾಹಿನಿ ಸುದ್ದಿ: ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಕೋರ್ಟ್ ಜಾಮೀನು ರಹಿತ ಬಂಧನ ವಾರಂಟ್ ಜಾರಿ ಮಾಡಿದೆ.
ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಕೋರ್ಟ್ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಪ್ರದೀಪ್ ಈಶ್ವರ್ ವಿರುದ್ಧ ಬೆಂಗಳೂರಿನ 42ನೇ ಎಸಿಜೆ ಎಂ ನ್ಯಾಯಾಲಯ ಬಂಧನ ವಾರಂಟ್ ಜಾರಿ ಮಾಡಿದೆ.
ಪ್ರದೀಪ್ ಈಶ್ವರ್, 11-1-2024ರಂದು ಪ್ರತಾಪ್ ಸಿಂಹ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಪ್ರತಾಪ್ ಸಿಂಹ ಪ್ರದೀಪ್ ಈಶ್ವರ್ ವಿರುದ್ಧ ಮಾನನಷ್ಟ ಕೇಸ್ ದಾಖಲಿಸಿದ್ದರು. ಪ್ರಕರಣದ ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಾಲಯ ವಿಚಾರಣೆಗೆ ಹಾಜರಾಗುವಂತೆ ಪ್ರದೀಪ್ ಈಸ್ವರ್ ಗೆ ಸೂಚಿಸಿತ್ತು.
ಆದರೆ ಕೋರ್ಟ್ ವಿಚಾರಣೆಗೆ ಪ್ರದೀಪ್ ಈಶ್ವರ್ ಗೈರಾಗಿದ್ದರು. ಈ ಹಿನ್ನೆಲೆಯಲ್ಲಿ ನ್ಯಾಯಾಲಯ ಇಂದು ಪ್ರದೀಪ್ ಈಸ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ ಮಾಡಿದೆ.




