Belagavi NewsBelgaum NewsPolitics

*ಮೃತರ ಕುಟುಂಬಗಳಿಗೆ ಲಕ್ಷ್ಮೀ ಹೆಬ್ಬಾಳಕರ್ ಸಾಂತ್ವನ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಎಳೇಬೈಲ್ ಹಾಗೂ ಇನಾಂ ಬಡಸ್ ಗ್ರಾಮಗಳ ಕಾಂಗ್ರೆಸ್ ಪಕ್ಷದ ಮುಖಂಡರ ಕುಟುಂಬಗಳಲ್ಲಿ ಇತ್ತೀಚೆಗೆ ಸಂಭವಿಸಿದ ದುಃಖದ ಘಟನೆಗಳ ಹಿನ್ನೆಲೆಯಲ್ಲಿ ಮಾಜಿ ಸಚಿವೆ, ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರು ಮೃತರ ಮನೆಗಳಿಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.


ಎಳೇಬೈಲ್ ಗ್ರಾಮದ ಕಾಂಗ್ರೆಸ್ ಪಕ್ಷದ ಮುಖಂಡ ಧಾನಾಜಿ ರಾಮು ಮೊರೆ ಅವರ ಪತ್ನಿ ಮಂಗಲ ಮೊರೆ ಅವರು ಇತ್ತೀಚೆಗೆ ನಿಧನರಾಗಿದ್ದರು. ಈ ಹಿನ್ನೆಲೆಯಲ್ಲಿ ಲಕ್ಷ್ಮೀ ಹೆಬ್ಬಾಳಕರ್ ಅವರು ಇಂದು ಅವರ ನಿವಾಸಕ್ಕೆ ಭೇಟಿ ನೀಡಿ, ಮೃತರ ಕುಟುಂಬಸ್ಥರಿಗೆ ಧೈರ್ಯ ತುಂಬಿದರು. ದುಃಖದ ಸಂದರ್ಭದಲ್ಲಿ ಕುಟುಂಬದೊಂದಿಗೆ ತಾವು ಇರುವುದಾಗಿ ತಿಳಿಸಿ, ಸಾಂತ್ವನ ಹೇಳಿದರು.

Home add -Advt


ಇದೇ ವೇಳೆ ಇನಾಂ ಬಡಸ್ ಗ್ರಾಮದ ಕಾಂಗ್ರೆಸ್ ಪಕ್ಷದ ಮುಖಂಡ ನಾರಾಯಣ ಪಾಟೀಲ ಅವರ ತಾಯಿ ಯುಲ್ಲುಬಾಯಿ ಪಾಟೀಲ ಅವರು ಇತ್ತೀಚೆಗೆ ನಿಧನರಾಗಿರುವ ಹಿನ್ನೆಲೆಯಲ್ಲಿ ಲಕ್ಷ್ಮೀ ಹೆಬ್ಬಾಳಕರ್ ಅವರು ಅವರ ನಿವಾಸಕ್ಕೂ ಭೇಟಿ ನೀಡಿದರು. ಕುಟುಂಬಸ್ಥರನ್ನು ಭೇಟಿಯಾಗಿ, ಮೃತರ ನಿಧನಕ್ಕೆ ಸಂತಾಪ ಸೂಚಿಸಿ, ಅವರ ದುಃಖದಲ್ಲಿ ಭಾಗಿಯಾದರು.


ಎರಡೂ ಕುಟುಂಬಗಳೊಂದಿಗೆ ಕೆಲಕಾಲ ಆತ್ಮೀಯವಾಗಿ ಮಾತನಾಡಿದ ಲಕ್ಷ್ಮೀ ಹೆಬ್ಬಾಳಕರ್ ಅವರು, ಅಗಲಿದವರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಕುಟುಂಬಸ್ಥರಿಗೆ ದುಃಖ ಭರಿಸುವ ಶಕ್ತಿ ದೊರೆಯಲಿ ಎಂದು ಪ್ರಾರ್ಥಿಸಿದರು.

Related Articles

Back to top button