Belagavi NewsBelgaum NewsKannada NewsKarnataka NewsLatest

*ಇಂದು, ನಾಳೆ ಹೆಚ್ಚಲಿದೆ ಮಳೆ ಅಬ್ಬರ*

ಪ್ರಗತಿವಾಹಿನಿ ಸುದ್ದಿ : ರಾಜ್ಯದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ಇಂದು ನಾಳೆ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಹಲವು ಜಿಲ್ಲೆಗಳಿಗೆ ಈಗಾಗಲೇ ಮಳೆ ಮುನ್ನೆಚ್ಚರಿಕೆ ನೀಡಲಾಗಿದೆ. ಮುಖ್ಯವಾಗಿ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡದಲ್ಲಿ ವ್ಯಾಪಕ ಮಳೆಯಾಗುವ ನಿರೀಕ್ಷೆಯಿದೆ. ಇದರೊಂದಿಗೆ ಕೊಡಗು, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಸೇರಿದಂತೆ ಮಲೆನಾಡಿನ ವಿವಿಧ ಭಾಗಗಳಲ್ಲಿ ಧಾರಾಕಾರ ಮಳೆಯಾಗಲಿದ್ದು ಗುಡುಗು ಸಹಿತ ಗಾಳಿ ಬೀಸುವ ಸಾಧ್ಯತೆಯಿದೆ.

Home add -Advt

ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿಯೂ ಸಾಧಾರಣದಿಂದ ಉತ್ತಮ ಮಳೆಯಾಗುವ ನಿರೀಕ್ಷೆಯಿದೆ. ತಗ್ಗು ಪ್ರದೇಶಗಳಲ್ಲಿ ನೀರು ನಿಲ್ಲುವ ಸಾಧ್ಯತೆಯಿದ್ದು, ಸಾರ್ವಜನಿಕರು ಹಾಗೂ ಪ್ರಯಾಣಿಕರು ಸೂಕ್ತ ಮುನ್ನೆಚ್ಚರಿಕೆ ವಹಿಸುವಂತೆ ಸ್ಥಳೀಯ ಆಡಳಿತಗಳು ಸೂಚಿಸಿವೆ.

Related Articles

Back to top button