Karnataka NewsLatestPolitics

*ರಾಜೀನಾಮೆ ನೀಡಲು ಮುಂದಾದ್ರಾ ಸಚಿವ ನಾಗೇಂದ್ರ?*

ಪ್ರಗತಿವಾಹಿನಿ ಸುದ್ದಿ: ಮಹತ್ವದ ಬೆಳವಣಿಗೆಯೊಂದರಲ್ಲಿ ಸಚಿವ ಬಿ.ನಾಗೇಂದ್ರ ತಮ್ಮ ಸ್ಥಾನಕ್ಕೆ ರಾಅಜೀನಾಮೆ ನೀಡಲು ಮುಂದಾಗಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ.

Home add -Advt

ವಾಲ್ಮೀಕಿ ಅಭಿವೃದ್ಧಿ ನಿಗಮಗದ ಹಗರಣಕ್ಕೆ ಸಂಬಂಧಿಸಿದಂತೆ ಆರೋಪ ಹೊತ್ತಿರುವ ನಾಗೇಂದ್ರಗೆ ಸಚಿವ ಸಂಪುಟದಲ್ಲಿ ಮತ್ತೆ ಸ್ಥಾನ ನೀಡಿರುವುದಕ್ಕೆ ವಿಪಕ್ಷ ಬಿಜೆಪಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಲ್ಲದೇ ಅಧಿವೇಶನದಲ್ಲಿಯೂ ಸದನದ ಒಳಗೆ ಹೊರಗೆ ಹೋರಾಟ ನಡೆಸಿದೆ. ಇದೀಗ ರಾಯಚೂರಿನಿಂದ ಬಳ್ಳಾರಿವರೆಗೂ ಪಾದಯಾತ್ರೆಗೆ ಮುಂದಾಗಿರ್ವ ಬಿಜೆಪಿ ನಾಗೇಂದ್ರ ರಾಜೀನಾಮೆಗೆ ಪಟ್ಟುಹಿಡಿದಿದೆ.

ಈ ಎಲ್ಲಾ ಬೆಳವಣಿಗೆಗಳ ಬೆನ್ನಲ್ಲೇ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಕರೆ ಮಾಡಿರುವ ನಾಗೇಂದ್ರ ರಾಜೀನಾಮೆ ಇಂಗಿತ ವ್ಯಕ್ತಪಡಿಸಿದ್ದಾರೆ ಎಂದು ತಿಳಿದುಬಂದಿದೆ. ಬಿಜೆಪಿಯವರು ಅನಗತ್ಯವಾಗಿ ನನ್ನನ್ನು ಟಾರ್ಗೆಟ್ ಮಾಡುತ್ತಿದ್ದಾರೆ. ನನ್ನಿಂದ ಪಕ್ಷಕ್ಕೆ ಮುಜುಗರವಾಗುವುದು ಬೇಡ. ನಾನು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದಿದ್ದಾರೆ ಎನ್ನಲಾಗಿದೆ. ಇದಕ್ಕೆ ಸಿಎಂ ಡಿ.ಕೆ.ಶಿವಕುಮಾರ್, ನಿಮ್ಮ ವಿಚಾರವನ್ನು ಹೈಕಮಾಂಡ್ ನಾಯಕರೊಂದಿಗೆ ಈ ಬಗ್ಗೆ ಮಾತನಾಡಿ ತಿಳಿಸುತ್ತೇನೆ ಎಂದು ಹೇಳಿದ್ದಾರೆ ಎಂದು ತಿಳಿದುಬಂದಿದೆ. ಒಟ್ಟಾರೆ ಸಚಿವ ನಾಗೇಂದ್ರ ರಾಜೀನಾಮೆಗೆ ಮುಂದಾಗಿದ್ದಾರೆ ಎನ್ನಲಾಗುತ್ತಿದೆ.


Related Articles

Back to top button