Kannada NewsKarnataka NewsLatest
*ಭೀಕರ ಅಪಘಾತ: ಮೂವರು ಯುವಕರು ಸ್ಥಳದಲ್ಲೇ ಸಾವು*

ಪ್ರಗತಿವಾಹಿನಿ ಸುದ್ದಿ: ನಿಂತಿದ್ದ ಟಾಟಾ ಏಸ್ ವಾಹನಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ.
ಕೊಪ್ಪಳ ಜಿಲ್ಲೆಯ ಬನ್ನಿಕೊಪ್ಪ ಗ್ರಾಮದ ಬಳಿ ಈ ಘಟನೆ ನಡೆದಿದೆ. ನರಗುಂದ ಮೂಲದ ಮೂವರು ಯುವಕರು ನರಗುಂದದಿಂದ ಕೊಪ್ಪಳದತ್ತ ಬೈಕ್ನಲ್ಲಿ ಬರುತ್ತಿದ್ದ ವೇಳೆ ನಿಂತಿದ್ದ ಟಾಟಾ ಏಸ್ ವಾಹನಕ್ಕೆ ಡಿಕ್ಕಿ ಹೊಡೆದಿದ್ದಾರೆ.
ಅಪಘಾತದ ರಭಸಕ್ಕೆ ಮೂವರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರನ್ನು ಮಾಬೂಸಾಬ್ ಬುಡನ್ ಸಾಬ್ ಮಟಗೇರಿ (17), ಫಕ್ರುಸಾಬ್ ಹಸನಸಾಬ್ ವಟಗೇರಿ (19) ಹಾಗೂ ಶಾನುಸಾಬ್ ಬಸಾಪುರ (15) ಎಂದು ಗುರುತಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.




