*ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ನಾಗೇಂದ್ರ*

ಪ್ರಗತಿವಾಹಿನಿ ಸುದ್ದಿ: ಮಹತ್ವದ ಬೆಳವಣಿಗೆಯೊಂದರಲ್ಲಿ ಸಚಿವ ಬಿ. ನಾಗೇಂದ್ರ ಅವರು ತಮ್ಮ ಸಚಿವ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ಸಲ್ಲಿಸಿದ್ದಾರೆ.
ಗುರುವಾರವೇ ನಾಗೇಂದ್ರ ಅವರು ತಮ್ಮ ರಾಜೀನಾಮೆ ಪತ್ರವನ್ನು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರಿಗೆ ತಲುಪಿಸಿದ್ದಾರೆ ಎಂದು ತಿಳಿದುಬಂದಿದೆ. ಆದರೆ ಈ ರಾಜೀನಾಮೆಯನ್ನು ಅಂಗೀಕರಿಸಬೇಕೇ ಅಥವಾ ತಿರಸ್ಕರಿಸಿ ಮುಂದುವರಿಯಬೇಕೇ ಎಂಬ ಗೊಂದಲದಲ್ಲಿ ಪಕ್ಷದ ವರಿಷ್ಠರು ಹಾಗೂ ನಾಯಕತ್ವವಿದ್ದು, ಈವರೆಗೆ ಯಾವುದೇ ಅಂತಿಮ ತೀರ್ಮಾನ ಕೈಗೊಂಡಿಲ್ಲ ಎಂ೦ದು ತಿಳಿದುಬಂದಿದೆ.
ನಾಗೇಂದ್ರ ಅವರು ಈಗಾಗಲೇ ತಮ್ಮ ರಾಜೀನಾಮೆ ಪತ್ರವನ್ನು ನಾಯಕತ್ವದ ಮುಂದಿಟ್ಟಿದ್ದು, ಸರ್ಕಾರಕ್ಕೆ ಮುಜುಗರವಾಗದಂತೆ ಹೆಜ್ಜೆಯಿಡಲು ಮುಂದಾಗಿದ್ದಾರೆ.
ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣದಲ್ಲಿ ಭಾಗಿಯಾಗಿರುವ ಆರೋಪ ಹೊತ್ತಿರುವ ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಸೆ.1 ರಿಂದ 10 ದಿನಗಳ ಕಾಲ ಬಳ್ಳಾರಿ ಚಲೋ ಪಾದಯಾತ್ರೆ ಬಿಜೆಪಿ ಪಾದಯಾತ್ರೆಗೂ ಮುನ್ನವೇ ಇದೀಗ ನಾಗೇಂದ್ರ ರಾಜೀನಾಮೆ ನೀಡಿದ್ದಾರೆ.




