*ಮುಂದಿನ 7 ದಿನ ಬಲವಾದ ಗಾಳಿಯೊಂದಿಗೆ ಬೀಳಲಿದೆ ಮಳೆ*

ಪ್ರಗತಿವಾಹಿನಿ ಸುದ್ದಿ: ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ, ಮುಂದಿನ 7 ದಿನಗಳ ಕಾಲ ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಬಲವಾದ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಅಂದಾಜಿಸಲಾಗಿದೆ.
ಜೊತೆಗೆ ರಾಜ್ಯದ ಒಳನಾಡು ಜಿಲ್ಲೆಗಳಲ್ಲಿ ಭಾಗಶಃ ಮೋಡಕವಿದ ವಾತಾವರಣದ ಜತೆಗೆ ಬಿಸಿಲಿನ ಅನುಭವವಾಗಲಿದ್ದು, ಕೆಲವು ಕಡೆ ಹಗುರ ಮಳೆಯಾಗುವ ನಿರೀಕ್ಷೆಯಿದೆ. ಮಲೆನಾಡಿನ ಭಾಗವಾದ ಮಡಿಕೇರಿಯಲ್ಲಿ ಗರಿಷ್ಠ 24 ಮತ್ತು ಕನಿಷ್ಠ 20 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶವಿರಲಿದೆ.
ಮಂಡ್ಯದಲ್ಲಿ 31 ಗರಿಷ್ಠ ಹಾಗೂ 21 ಕನಿಷ್ಠ ತಾಪಮಾನ ಇರಲಿದ್ದು, ಮಡಿಕೇರಿಯಲ್ಲಿ 25 ಗರಿಷ್ಠ ಹಾಗೂ 20 ಕನಿಷ್ಠ ಉಷ್ಣಾಂಶ ದಾಖಲಾಗಲಿದೆ. ರಾಮನಗರ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಗರಿಷ್ಠ 31 ಹಾಗೂ ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ಇರಲಿದೆ. ಹಾಸನದಲ್ಲಿ 27-19, ಕೋಲಾರದಲ್ಲಿ 30-21, ತುಮಕೂರು, ದಾವಣಗೆರೆ, ಚಿತ್ರದುರ್ಗ ಹಾಗೂ ಗದಗದಲ್ಲಿ 29-22, ಮತ್ತು ಚಿಕ್ಕಬಳ್ಳಾಪುರದಲ್ಲಿ 29-20 ಡಿಗ್ರಿ ಸೆಲ್ಸಿಯಸ್ ವಾತಾವರಣ ಇರಲಿದೆ.
ಉಡುಪಿ ಮತ್ತು ಮಂಗಳೂರಿನಲ್ಲಿ ಗರಿಷ್ಠ 30 ಹಾಗೂ ಕನಿಷ್ಠ 25 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದ್ದು, ಕಾರವಾರದಲ್ಲಿ 28-27 ಡಿಗ್ರಿ ಉಷ್ಣಾಂಶ ದಾಖಲಾಗಲಿದೆ. ಚಿಕ್ಕಮಗಳೂರಿನಲ್ಲಿ 24-19, ಹುಬ್ಬಳ್ಳಿಯಲ್ಲಿ 28-22, ಬೆಳಗಾವಿಯಲ್ಲಿ 27-22 ಹಾಗೂ ಶಿವಮೊಗ್ಗದಲ್ಲಿ 28-22 ಡಿಗ್ರಿ ಸೆಲ್ಸಿಯಸ್ ವಾತಾವರಣ ಕಂಡುಬರಲಿದೆ. ಹಾವೇರಿಯಲ್ಲಿ 29-23, ಬಳ್ಳಾರಿಯಲ್ಲಿ 32-24, ಕೊಪ್ಪಳದಲ್ಲಿ 31-23, ವಿಜಯಪುರದಲ್ಲಿ 32-24, ಮೈಸೂರಿನಲ್ಲಿ 30-22 ಮತ್ತು ಬಾಗಲಕೋಟೆಯಲ್ಲಿ 31-23 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
ಉತ್ತರ ಕರ್ನಾಟಕ ಭಾಗದ ರಾಯಚೂರು ಮತ್ತು ಯಾದಗಿರಿಯಲ್ಲಿ ಗರಿಷ್ಠ 33 ಹಾಗೂ ಕನಿಷ್ಠ 25 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಮೂಲಕ ಹೆಚ್ಚು ಬಿಸಿಲಿನ ವಾತಾವರಣ ಇರಲಿದ್ದು, ಕಲಬುರಗಿಯಲ್ಲಿ 32-24 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ಇರಲಿದೆ.
ರಾಜಧಾನಿ ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಸಾಧ್ಯತೆಯಿದೆ.




