Kannada NewsKarnataka NewsLatest

*ಬಿಟ್ ಕಾಯಿನ್ ಹಗರಣ: ಶ್ರೀಕಿ, ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ*

ಪ್ರಗತಿವಾಹಿನಿ ಸುದ್ದಿ: ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾಗಿರುವ ಹ್ಯಾಕರ್ ಶ್ರೀಕಿ ಹಾಗೂ ರಾಬಿನ್ ಖಂಡೇವಾಲ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಇಡಿ ವಿಶೇಷ ನ್ಯಾಯಾಲಯ ವಜಾಗೊಳಿಸಿದೆ.

ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದು, ಕೆಲ ತಿಂಗಳ ಹಿಂದೆ ಪ್ರಕರಣ ದಾಖಲಿಸಿಕೊಂಡು ಹಲವು ಆರೋಪಿಗಳ ಮನೆಗಳ ಮೇಲೆ ದಾಳಿ ನಡೆಸಿದ್ದರು. ಈ ಪ್ರಕರಣದಲ್ಲಿ ಹ್ಯಾಕರ್ ಶ್ರೀಕಿ, ರಾಬಿನ್ ಖಂಡೇವಾಲ ಹಾಗೂ ಸುಖೇಶ್ ಹೆಗ್ಡೆ ಅವರನ್ನು ಇಡಿ ಅಧಿಕಾರಿಗಳು ಬಂಧಿಸಿದ್ದರು.

Home add -Advt

ಇದೇ ವೇಳೆ ಕಾಂಗ್ರೆಸ್ ಯುವ ನಾಯಕ ಮೊಹಮ್ಮದ್ ನಲಪಾಡ್, ಶ್ರೀಕಿ, ರಾಬಿನ್ ಖಂಡೇವಾಲ ಹಾಗೂ ಸುಖೇಶ್ ಹೆಗ್ಡೆ ಅವರ ನಿವಾಸಗಳ ಮೇಲೂ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದರು.

ತನಿಖೆ ಪೂರ್ಣಗೊಳಿಸಿದ ಬಳಿಕ ಇಡಿ ಅಧಿಕಾರಿಗಳು ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಿದ್ದರು. ಇದರ ಬೆನ್ನಲ್ಲೇ ಶ್ರೀಕಿ ಹಾಗೂ ರಾಬಿನ್ ಖಂಡೇವಾಲ ಜಾಮೀನು ಕೋರಿ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಇಬ್ಬರ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ.

Related Articles

Back to top button