Kannada NewsKarnataka NewsLatest
*ಐಎಎಸ್ ಅಧಿಕಾರಿ ಗ್ಯಾನೇಂದ್ರ ಕುಮಾರ್ ಜೈಲುಪಾಲು*

ಪ್ರಗತಿವಾಹಿನಿ ಸುದ್ದಿ: ಕೆಪಿಎಸ್ ಸಿ ಪಶುವೈದ್ಯಾಧಿಕಾರಿ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳಿಂದ ಬಂಧಿಸಲ್ಪಟ್ಟಿರುವ ಐಎಎಸ್ ಅಧಿಕಾರಿ ಗ್ಯಾನೇಂದ್ರ ಕುಮಾರ್ ಅವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಐಎಎಸ್ ಅಧಿಕಾರಿ ಗ್ಯಾನೇಂದ್ರ ಕುಮಾರ್ ಅವರನ್ನು ಸಿಐಡಿ ಅಧಿಕಾರಿಗಳು ಇಂದು ಕೋರಮಂಗಲದಲ್ಲಿರುವ ಬೆಂಗಳೂರಿನ 1ನೇ ಎಸಿಜೆಎಂ ಕೋರ್ಟ್ ನ ಜಡ್ಜ್ ನಿವಾಸದಲ್ಲಿ ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದ್ದರು. ಈ ವೇಳೆ ನ್ಯಾಯಾಧೀಶರು ಗ್ಯಾನೇಂದ್ರ ಕುಮಾರ್ ಅವರಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಐಎಎಸ್ ಅಧಿಕಾರಿ ಗ್ಯಾನೇಂದ್ರ ಕುಮಾರ್ ಪರಪ್ಪನ ಅಗ್ರಹಾರ ಜೈಲು ಪಲಾಗಿದ್ದಾರೆ.




