Karnataka NewsLatestPolitics

*ವಿವಾದದ ಬೆನ್ನಲ್ಲೇ ಉಲ್ಟಾ ಹೊಡೆದ ಸಚಿವ ರಾಯರೆಡ್ಡಿ*

ಪ್ರಗತಿವಾಹಿನಿ ಸುದ್ದಿ: ಎಲ್ಲಾ ಧರ್ಮಕ್ಕಿಂತ ಇಸ್ಲಾಂ ಧರ್ಮ ಶ್ರೇಷ್ಠ. ನಾನು ಮಠ, ಮಂದಿರಗಳಿಗೆ ಹೋಗಲ್ಲ ಎಂದು ಹೇಳುವ ಮೂಲಕ ವಿವಾದ ಸೃಷ್ಟಿಸಿದ್ದ ಉನ್ನತ ಶಿಕ್ಷಣ ಸಚಿವ ಬಸವರಾಜ್ ರಾಯರೆಡ್ಡಿ, ಇದೀಗ ಉಲ್ಟಾ ಹೊಡೆದಿದ್ದಾರೆ.

ಯಲಬುರ್ಗಾ ಪಟ್ಟಣದಲ್ಲಿ ಮಾತನಾಡಿದ ಅವರು, ತಾವು ಯಾವುದೇ ಧರ್ಮವನ್ನು ಕಡಿಮೆ ಎಂದು ಹೇಳಿಲ್ಲ. ಎಲ್ಲ ಧರ್ಮಗಳಲ್ಲಿರುವ ಉತ್ತಮ ವಿಚಾರಗಳನ್ನು ಗೌರವಿಸುವುದಾಗಿ ಹೇಳಿದ್ದಾರೆ.

Home add -Advt

ಸಾಂದರ್ಭಿಕವಾಗಿ ಮಾತನಾಡುವ ವೇಳೆ ಇಸ್ಲಾಂ ಧರ್ಮದಲ್ಲಿರುವ ಕೆಲವು ಉತ್ತಮ ವಿಚಾರಗಳ ಬಗ್ಗೆ ಹೇಳಿದ್ದಾಗಿ ತಿಳಿಸಿದ್ದಾರೆ. ಎಲ್ಲ ಧರ್ಮಗಳೂ ಶ್ರೇಷ್ಠ ಎಂದು ನಾನು ಹೇಳಿದ್ದೇನೆ. ಇಸ್ಲಾಂ ಧರ್ಮದಲ್ಲೂ ಶ್ರೇಷ್ಠ ವಿಚಾರಗಳಿವೆ ಎಂದು ಹೇಳಿದ್ದೇನೆ. ಬೇರೆ ಧರ್ಮಗಳು ಕಡಿಮೆ ಎಂದು ಹೇಳಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ನಾನು ಯಾವುದೇ ನಿರ್ದಿಷ್ಟ ಧರ್ಮದ ಅನುಯಾಯಿ ಅಲ್ಲ. ಇಸ್ಲಾಂ, ಕ್ರೈಸ್ತ ಮತ್ತು ಯಹೂದಿ ಧರ್ಮಗಳ ಕುರಿತು ಅಧ್ಯಯನ ಮಾಡುವುದಾಗಿ ಹೇಳಿದ್ದಾರೆ. ವಿವಿಧ ಧರ್ಮಗಳ ಧಾರ್ಮಿಕ ಸ್ಥಳಗಳಿಗೆ ಭೇಟಿ ನೀಡಿರುವುದಾಗಿಯೂ ತಿಳಿಸಿದ್ದು, ಹಜ್ ಯಾತ್ರೆಗೆ ತೆರಳುವ ಆಸೆ ವ್ಯಕ್ತಪಡಿಸಿದ್ದರೂ ಸದ್ಯ ಅದು ಸಾಧ್ಯವಾಗುತ್ತಿಲ್ಲ ಎಂದು ಹೇಳಿದ್ದಾರೆ.

ಬಸವಣ್ಣನ ವಚನವನ್ನು ಉಲ್ಲೇಖಿಸಿದ ರಾಯರೆಡ್ಡಿ, “ಕಳಬೇಡ, ಕೊಲಬೇಡ, ಹುಸಿಯ ನುಡಿಯಲು ಬೇಡ” ಎಂಬ ಶರಣ ತತ್ವವನ್ನು ಪ್ರಸ್ತಾಪಿಸಿದರು. ಮನುಷ್ಯತ್ವ ಮತ್ತು ಉತ್ತಮ ವಿಚಾರಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದು ಮುಖ್ಯ ಎಂಬ ನಿಲುವನ್ನು ಅವರು ವ್ಯಕ್ತಪಡಿಸಿದರು.

Related Articles

Back to top button