Belagavi NewsBelgaum NewsCrimeKannada NewsKarnataka NewsNational
*ಬೆಳಗಾವಿಯ ಮುಲ್ಲಾ ಧಾಬಾಗೆ ಊಟಕ್ಕೆ ಹೋಗಿದ್ದವರ ಕಾರು ಅಪಘಾತ: 3 ಸಾವು*

ಪ್ರಗತಿವಾಹಿನಿ ಸುದ್ದಿ: ಚಾಲಕನ ನಿಯಂತ್ರಣ ತಪ್ಪಿದ ಕಾರ್ ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಧಾರವಾಡ ತಾಲೂಕಿನ ವೆಂಕಟಾಪುರ ಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಬೆಳ್ಳಂ ಬೆಳಗ್ಗೆ ಈ ದುರ್ಘಟನೆ ನಡೆದಿದೆ. ಮೃತರನ್ನು ದಾವಣಗೆರೆ ಜಿಲ್ಲೆಯ ಕೆರೆಯಾಗಳ ಗ್ರಾಮದ ವಿನಾಯಕ್ (25), ಮಂಜುನಾಥ್ (29) ಹಾಗೂ ಬಸವರಾಜ (34) ಎಂದು ಗುರುತಿಸಲಾಗಿದೆ. ಬೆಳಗಾವಿಯಿಂದ ಧಾರವಾಡಕ್ಕೆ ಬರುತ್ತಿದ್ದಾಗ ಈ ಭೀಕರ ದುರಂತ ಸಂಭವಿಸಿದೆ.
ಗಾಯಾಳುಗಳಾದ ಅಭಿಷೇಕ್, ಅಜಯ್ ಹಾಗೂ ಬಸನಗೌಡ ಎನ್ನುವರು ಗಂಭೀರ ಗಾಯಗೊಂಡಿದ್ದು, ಧಾರವಾಡ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಮುಲ್ಲಾ ಧಾಬಾದಲ್ಲಿ ಊಟ ಮುಗಿಸಿಕೊಂಡು ಕಾರಿನಲ್ಲಿ ಧಾರವಾಡದತ್ತ ಮರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.
ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ಗರಗ ಪೊಲೀಸ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.




