Kannada NewsKarnataka NewsNationalPolitics
*ಬೆಂಗಳೂರಿನಲ್ಲಿ ವಾಸವಾಗಿದ್ದ 31 ಬಾಂಗ್ಲಾ ಪ್ರಜೆಗಳ ಗಡಿಪಾರು*

ಪ್ರಗತಿವಾಹಿನಿ ಸುದ್ದಿ: ಬೆಂಗಳೂರಿನ ವಿವಿಧ ಕಡೆ ಅಕ್ರಮವಾಗಿ ವಾಸಿಸುತ್ತಿದ್ದ ಒಟ್ಟು 31 ಬಾಂಗ್ಲಾದೇಶಿ ಪ್ರಜೆಗಳನ್ನು ಪೊಲೀಸರು ಗಡಿಪಾರು ಮಾಡಿದ್ದಾರೆ
ಬೆಂಗಳೂರು ನಗರದ ವಿವಿಧ 10 ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಬಂಧಿಸಲಾಗಿದ್ದ ಈ 31 ಮಂದಿಯನ್ನು ಅಗತ್ಯ ಕಾನೂನು ಪ್ರಕ್ರಿಯೆ ಪೂರ್ಣಗೊಳಿಸಿದ ಬಳಿಕ ಪೊಲೀಸ್ ಭದ್ರತೆಯಲ್ಲಿ ಗಡಿಪಾರು ಮಾಡಿದ್ದಾರೆ.
ಬಂಧಿತ ಬಾಂಗ್ಲಾ ಪ್ರಜೆಗಳನ್ನು ಸುಮಾರು 20 ಪೊಲೀಸ್ ಸಿಬ್ಬಂದಿಗಳ ಭದ್ರತೆಯೊಂದಿಗೆ ಬೆಂಗಳೂರಿನ ರೈಲ್ವೇ ಟರ್ಮಿನಲ್‌ಗೆ ಕರೆದೊಯ್ಯಲಾಯಿತು. ಅಲ್ಲಿಂದ ರೈಲಿನ ಮೂಲಕ ಪಶ್ಚಿಮ ಬಂಗಾಳದ ಗಡಿಭಾಗಕ್ಕೆ ಕರೆದೊಯ್ದ ಪೊಲೀಸರು, ಬಳಿಕ ಅಲ್ಲಿಂದ ಬಾಂಗ್ಲಾದೇಶಕ್ಕೆ ವಾಪಸ್ ಕಳುಹಿಸಿದ್ದಾರೆ.
ಬೆಂಗಳೂರಿನ ವಿವಿಧ 10 ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಈ 31 ಮಂದಿಯನ್ನ ಪೊಲೀಸರು ವಶಕ್ಕೆ ಪಡೆದಿದ್ದರು. ಇವರ ದಾಖಲೆಗಳು ಹಾಗೂ ಭಾರತದಲ್ಲಿ ವಾಸ್ತವ್ಯಕ್ಕೆ ಸಂಬಂಧಿಸಿದ ವಿಚಾರಗಳ ಪರಿಶೀಲನೆ ಬಳಿಕ ಗಡಿಪಾರು ಪ್ರಕ್ರಿಯೆ ಕೈಗೊಳ್ಳಲಾಗಿದೆ.



