CrimeKarnataka NewsLatest

*ಆಟೋ-ಲಾರಿ ನಡುವೆ ಅಪಘಾತ: ತಾಯಿ, 3 ತಿಂಗಳ ಮಗು ಸಾವು*

ಪ್ರಗತಿವಾಹಿನಿ ಸುದ್ದಿ: ಆಟೋ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ತಾಯಿ ಮತ್ತು ಮೂರು ತಿಂಗಳ ಮಗು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ.

ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದ ಹೊರವಲಯದಲ್ಲಿ ಈ ದುರ್ಘಟನೆ ನಡೆದಿದೆ. ಮೃತರನ್ನು ಶರಣಮ್ಮ (30) ಹಾಗೂ ಅವರ ಮೂರು ತಿಂಗಳ ಮಗು ಸಾವನ್ನಪ್ಪಿದೆ. 

Home add -Advt

ವಾಡಿ ಪಟ್ಟಣಕ್ಕೆ ಆಗಮಿಸುತ್ತಿದ್ದ ವೇಳೆ ಆಟೋಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಲಾರಿ ಡಿಕ್ಕಿಯ ರಭಸಕ್ಕೆ ಆಟೋ ಜಖಂಗೊಂಡಿದ್ದು ಅದರಲ್ಲಿದ್ದ ಶರಣಮ್ಮ ಹಾಗೂ ಮಗು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. 

ಅಪಘಾತದಲ್ಲಿ ಶರಣಮ್ಮ ಅವರ ಅತ್ತೆ ಸಾಬಮ್ಮ ಹಾಗೂ ಆಟೋ ಚಾಲಕ ಖಾಜಾ ಪಟೇಲ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ.

ಘಟನೆಗೆ ಸಂಬಂಧಿಸಿದಂತೆ ವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಅಪಘಾತದ ಕುರಿತು ತನಿಖೆ ನಡೆಸುತ್ತಿದ್ದಾರೆ. ಘಟನೆಯಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

Related Articles

Back to top button