Kannada NewsKarnataka NewsLatest

*BREAKING: ಸಂತಾನಹರಣ ಆಪರೇಷನ್ ಮಾಡಬೇಕೆನ್ನುವಷ್ಟರಲ್ಲಿ ಮಹಿಳೆ ಹೃದಯಾಘಾತಕ್ಕೆ ಬಲಿ*

ಪ್ರಗತಿವಾಹಿನಿ ಸುದ್ದಿ: ಸಂತಾನಹರಣ ಶಸ್ತ್ರಚಿಕಿತ್ಸೆ ವೇಳೆ ಮಹಿಳೆಯೊಬ್ಬರು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ತಾಲೂಕು ಆಸ್ಪತ್ರೆಯಲ್ಲಿ ನಡೆದಿದೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ ತಾಲೂಕು ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ. ಆಂಧ್ರಪ್ರದೇಶದ ಅನಂತಪುರ ಮೂಲದ ಸಿಂಧೂ ಮೃತ ಮಹಿಳೆ.

Home add -Advt

ಸಂತಾನಹರಣ ಶಸ್ತ್ರಚಿಕಿತ್ಸೆಗೆಂದು ಗುಡಿಬಂಡೆ ತಾಲೂಕು ಆಸ್ಪತ್ರೆಗೆ ದಾಖಲಾಗಿದ್ದರು. ಅನಸ್ತೇಷಿಯಾ ನೀಡಿ ಮಹಿಳೆಗೆ ಆಪರೇಷನ್ ಮಾಡಬೇಕು ಎನ್ನುವಷ್ಟರಲ್ಲಿ ಹೃದಯಾಘಾತ ಸಂಭವಿಸಿ ಮಹಿಳೆ ಮೃತಪಟ್ಟಿದ್ದಾರೆ.

ಅನಸ್ತೇಷಿಯಾ ನೀಡಿದ ಬಳಿಕ ಮಹಿಳೆಗೆ ಹೃದಯಘಾತವಾಗಿದೆ. ಆಸ್ಪತ್ರೆ ವೈದ್ಯರ ನಿರ್ಲಕ್ಷವೇ ದುರಂತಕ್ಕೆ ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಗುಡಿಬಂಡೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Related Articles

Back to top button