Belagavi NewsBelgaum NewsLatestLife Style

*ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಬೆಳಗಾವಿಯಲ್ಲಿ ವಿಶೇಷ ಕಾರ್ಯಕ್ರಮ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ: ಬೆಳಗಾವಿ ಆರ್‌ಪಿಡಿ ಕಾಲೇಜು ಎದುರಿನ ಶ್ರೀ ಕೃಷ್ಣ ಮಠದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಧಾರ್ಮಿಕ ಹಾಗೂ ಸಾಂಸ್ಕೃತಿಕ ವಿಶೇಷ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ.

Home add -Advt

ಸೆಪ್ಟೆಂಬರ್ 4 ರಂದು ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಉಪವಾಸ ಆಚರಣೆ ನಡೆಯಲಿದೆ. ಬೆಳಗ್ಗೆ 8 ಕ್ಕೆ ಶ್ರೀ ಕೃಷ್ಣ ದೇವರಿಗೆ ಲಕ್ಷ ತುಳಸಿ ಅರ್ಚನೆ, 11:30ಕ್ಕೆ ಲಕ್ಷ ತುಳಸಿ ಅರ್ಚನೆ ಸಮಾಪ್ತಿ ಮುಂತಾದ ಕಾರ್ಯಕ್ರಮ ನಡೆಯಲಿವೆ. 12 ಗಂಟೆಯಿಂದ ವಿವಿಧ ಭಜನಾ ಮಂಡಳಿಗಳಿಂದ ಹರಿ ಭಜನೆ ಕಾರ್ಯಕ್ರಮ ನಡೆಯಲಿದೆ.

ವರದೇಂದ್ರ ಗಂಗಖೇಡ ರಾಯಚೂರು ಮತ್ತು ಸಂಗಡಿಗರಿಂದ ದಾಸವಾಣಿ ಕಾರ್ಯಕ್ರಮ ಆಯೋಜಿಸಲಾಗಿದೆ. ರಾತ್ರಿ 8 ರಿಂದ ದತ್ತ ಕುಮಾರ್ ಮುತಾಲಿಕ್ ದೇಸಾಯಿ ಮತ್ತು ಸಂಗಡಿಗರಿಂದ ಕಾರ್ಯಕ್ರಮ ನಡೆಯಲಿದೆ.

ಸೆಪ್ಟೆಂಬರ್ 5 ರಂದು ನಸುಕಿನ 4 ಗಂಟೆಗೆ ನೈರ್ಮಲ್ಯ ಅಭಿಷೇಕ, ಪಂಚಾಮೃತ ಅಭಿಷೇಕ, ವಿಶೇಷ ಬೆಣ್ಣೆ ಅಲಂಕಾರ, ಬೆಳಿಗ್ಗೆ 7 ಗಂಟೆಗೆ ಮಹಾಪೂಜೆ, ಮಂಗಳಾರತಿ, ಸಂಜೆ 4:30ಕ್ಕೆ ಸಂಪದ ರಾವ್ ಶಿಷ್ಯವೃಂದದವರಿಂದ ಭರತನಾಟ್ಯ ಪ್ರದರ್ಶನ, ಸಂಜೆ 5:30 ರಿಂದ ಚಿಣ್ಣರಿಂದ ಶ್ರೀ ಕೃಷ್ಣವೇಷ ಸ್ಪರ್ಧೆ, 6.30ಕ್ಕೆ ಮೊಸರು ಗಡಿಗೆ ಒಡೆಯುವ ಕಾರ್ಯಕ್ರಮ, 7:00 ಗಂಟೆಗೆ ಪಲ್ಲಕ್ಕಿ ಉತ್ಸವ, ರಥೋತ್ಸವ, ದೀಪಾರಾಧನೆ, ರಂಗ ಪೂಜೆ, ಮಹಾ ಮಂಗಳಾರತಿ ಮುಂತಾದ ಕಾರ್ಯಕ್ರಮ ನೆರವೇರಲಿದೆ ಎಂದು ಶ್ರೀ ಕೃಷ್ಣ ಮಠದ ಪ್ರಕಟಣೆ ತಿಳಿಸಿದೆ.

Related Articles

Back to top button