
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಸರಣಿ ಬೈಕ್ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿದ ಬೆಳಗಾವಿ ಪೊಲೀಸರು 2 ಲಕ್ಷ ಮೌಲ್ಯದ ಬೈಕ್ಗಳನ್ನು ವಶಕ್ಕೆ ಪಡೆದಿದ್ದಾರೆ.
ಮೂಡಲಗಿ ಪಟ್ಟಣದ ವೀರಭದ್ರೇಶ್ವರ ದೇವಸ್ಥಾನದ ಬಳಿ ಕಳುವಾಗಿದ್ದ ಬೈಕ್ ಪ್ರಕರಣ ಭೇದಿಸಿದ ಮೂಡಲಗಿ ಪೊಲೀಸ್ ಠಾಣೆ ಸಿಬ್ಬಂದಿ ಸುಭಾಷ್ ಶಿವನಪ್ಪ ರಡ್ಡೇರಟ್ಟಿ (34) ಎಂಬ ಆರೋಪಿಯನ್ನು ಬಂಧಿಸಿದ್ದಾರೆ.
ಪಿಎಸ್ಐ ವೈ. ಎಸ್. ಬಿಸನಾಳ ನೇತೃತ್ವದ ತನಿಖಾ ತಂಡದಿಂದ ಯಶಸ್ವಿ ಕಾರ್ಯಾಚರಣೆ ನಡೆಸಿದ್ದರು. ಈ ವೇಳೆಮೂಡಲಗಿ-ಮಸಗುಪ್ಪಿ ರಸ್ತೆಯ ಎಪಿಎಂಸಿ ದ್ವಾರದ ಬಳಿ ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು ಆರೋಪಿಯಿಂದ 2 ಲಕ್ಷ ರೂ. ಮೌಲ್ಯದ 4 ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ.
ಸದರಿ ಪ್ರಕರಣ ಭೇದಿಸಿದ ಪೊಲೀಸ್ ತಂಡಕ್ಕೆ ಹಿರಿಯ ಅಧಿಕಾರಿಗಳು ಹಾಗೂ ಸಾರ್ವಜನಿಕರಿಂದ ಶ್ಲಾಘಿಸಿದ್ದಾರೆ.



