EducationKarnataka NewsLatest

*ಸರ್ಕಾರಿ ಶಾಲೆ ಮೇಲ್ಛಾವಣಿ ಕುಸಿದು 8 ಮಕ್ಕಳಿಗೆ ಗಾಯ: ಮುಖ್ಯಶಿಕ್ಷಕ ಸೇರಿ ಮೂವರು ಸಸ್ಪೆಂಡ್*

ಪ್ರಗತಿವಾಹಿನಿ ಸುದ್ದಿ: ಸರ್ಕಾರಿ ಶಾಲೆಯ ಮೇಲ್ಛಾವಣಿ ಕುಸಿದು ಬಿದ್ದು, 8 ಮಕ್ಕಳು ಗಾಯಗೊಂಡ ಘಟನೆ ನಡೆದಿದ್ದು, ಪ್ರಭಾರಿ ಮುಖ್ಯ ಶಿಕ್ಷಕ ಸೇರಿ ಮೂವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.

Home add -Advt

ಬಾಗಲಕೋಟೆ ತಾಲೂಕಿನ ಮುಗಳೊಳ್ಳಿ ತಾಂಡಾ ಪ್ರದೇಶದಲ್ಲಿರುವ ಸರ್ಕಾರಿ ಶಾಲೆಯಲ್ಲಿ ಈ ಘಟನೆ ನಡೆದಿದೆ. ಘಟನೆ ಬೆನ್ನಲ್ಲೇ ಶಾಲೆಯ ಪ್ರಭಾರಿ ಮುಖ್ಯ ಶಿಕ್ಷಕ ಸಿ.ಬಿ.ಹೆಳವರ ಅವರನ್ನು ಅಮಾನತ್ತುಗೊಳಿಸಿ ಶಾಲಾಶಿಕ್ಷಣ ಇಲಾಖೆಯ ಉಪನಿರ್ದೇಶಕ ಆರ್.ಎಸ್.ಸೀತಾರಾಮು ಆದೇಶಿಸಿದ್ದಾರೆ. ಕೊಠಡಿಯ ಮೆಲ್ಛಾವಣಿ ದುರಸ್ತಿ ಹಂತದಲ್ಲಿದ್ದರೂ ಇಲಾಖೆಗೆ ತಿಳಿಸದೆ ಕರ್ತವ್ಯ ಲೋಪ ಎಸಗಿರುವ ಆರೋಪದ ಹಿನ್ನೆಲೆ ಕರ್ನಾಟಕ ನಾಗರಿಕ ಸೇವೆ 1957ರ‌ ನಿಯಮ 10 (1) ರ‌ ಅನ್ವಯ ಅವರನ್ನು ಅಮಾನತು ಮಾಡಲಾಗಿದೆ.

ಶಾಲಾ ಕಟ್ಟಡದ ಫಿಟ್ನೆಸ್ ಸಂಬಂಧ ಸರಿಯಾದ ಪ್ರಮಾಣಪತ್ರ ಕೊಡುವಲ್ಲಿ ವಿಫಲವಾದ ಹಿನ್ನೆಲೆ ಪಿಆರ್​ಇಡಿ ಸಹಾಯಕ‌ ಕಾರ್ಯಪಾಲಕ ಇಂಜಿನಿಯರ್ ಎಸ್.ಎಂ.ರೇವಡಿ ಮತ್ತು ಜ್ಯೂನಿಯರ್ ಇಂಜಿನಿಯರ್ ಎಸ್.ಎಂ.ಸಂಗನಾಳ ಅವರನ್ನು ಕೂಡ ಕೂಡ ಅಮಾನತು ಮಾಡಿ ಬಾಗಲಕೋಟೆ ಜಿಲ್ಲಾಪಂಚಾಯಿತಿ ಸಿಇಓ ಗಜಾನನ ಬಾಲೆ ಆದೇಶ ಹೊರಡಿಸಿದ್ದಾರೆ.

ಶಾಲೆಯಲ್ಲಿ ತರಗತಿ ನಡೆಯುತ್ತಿದ್ದ ವೇಳೆಯೇ ಸೆಪ್ಟೆಂಬರ್ 2ರಂದು ಕೊಠಡಿಯ ಮೇಲ್ಛಾವಣಿಯ ಒಂದು ಭಾಗ ಕುಸಿದು ಬಿದ್ದಿತ್ತು. ಎಂಟು ಮಕ್ಕಳು ಗಾಯಗೊಂಡಿದ್ದರು. ಶಾಲಾ ಆರಂಭದ ವೇಳೆ ಜಿಲ್ಲೆಯಾದ್ಯಂತ ಕಟ್ಟಡ ಸ್ಥಿತಿಗತಿ ಬಗ್ಗೆ ಪರಿಶೀಲನೆ ನಡೆಸಲಾಗಿತ್ತು. ಈ ವೇಳೆ 628 ಶಾಲಾ ಕಟ್ಟಡಗಳು ಅನ್​​ಫಿಟ್​​ ಎಂದು ವರದಿ ನೀಡಲಾಗಿತ್ತು. ಆದರೆ ಈ ಶಾಲೆಯ ಹೆಸರು ಆ ಲಿಸ್ಟ್​​ನಲ್ಲಿ ಇರಲಿಲ್ಲ. ಹೀಗಾಗಿ ಮೇಲ್ನೋಟಕ್ಕೆ ಎಂಜಿನಿಯರ್​​ ಶಾಲೆಯ ಕಟ್ಟಡವನ್ನು ಸರಿಯಾಗಿ ಪರಿಶೀಲನೆ ನಡೆಸದಿರೋದು ಸಾಬೀತಾಗಿದ್ದ ಕಾರಣ ಇಂಜಿನಿಯರ್ ಗಳನ್ನು ಸಸ್ಪೆಂಡ್ ಮಾಡಲಾಗಿದೆ.

Related Articles

Back to top button