
ಪ್ರಗತಿವಾಹಿನಿ ಸುದ್ದಿ: ಪೇಯಿಂಗ್ ಗೆಸ್ಟ್ (ಪಿಜಿ) ವಸತಿ ಗೃಹಗಳಲ್ಲಿ ಕಳಪೆ ಆಹಾರ ನೀಡುತ್ತಿರುವ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ಆಹಾರ ಇಲಾಖೆ ಅಧಿಕಾರಿಗಳು ಪಿಜಿಗಳ ಮೇಲೆ ದಿಢೀರ್ ದಾಳಿ ನಡೆಸಿದ್ದಾರೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವಿವಿಧ ಪ್ರದೇಶದಲ್ಲಿರುವ 64 ಪಿಜಿಗಳ ಮೇಲೆ ಆಹಾರ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಆಹಾರ ಸುರಕ್ಷತೆ ಮತ್ತು ನೈರ್ಮಲ್ಯ ಪರಿಶೀಲನೆ ನಡೆಸುವ ನಿಟ್ಟಿನಲ್ಲಿ ದಾಳಿ ನಡೆಸಿದ್ದು, ಈ ಬೃಹತ್ ಕಾರ್ಯಾಚರಣೆಯಲ್ಲಿ ಹಲವಾರು ಕಡೆಗಳಲ್ಲಿ ಆಹಾರ ಸುರಕ್ಷತೆಯ ನಿಯಮ ಉಲ್ಲಂಘನೆ ಮಾಡಿರುವುದು ಬೆಳಕಿಗೆ ಬಂದಿದೆ.
ದಾಳಿಯ ವೇಳೆ, 23 ಪಿಜಿಗಳಿಂದ 12 ಆಹಾರ ಮಾದರಿಗಳನ್ನು ಪರೀಕ್ಷೆಗಾಗಿ ಸಂಗ್ರಹಿಸಲಾಗಿದೆ. ಈ ಪರೀಕ್ಷೆಗಳ ಪ್ರಾಥಮಿಕ ವರದಿಯಲ್ಲಿ, ಮೊಸರು, ಅಕ್ಕಿಹಿಟ್ಟು, ಆಹಾರ ಬಣ್ಣ ಮತ್ತು ಕರಿಮೆಣಸು ಸೇರಿದಂತೆ ಹಲವು ಅವಧಿ ಮೀರಿದ ಆಹಾರ ಪದಾರ್ಥಗಳನ್ನು ವಶಪಡಿಸಿಕೊಳ್ಳಲಾಗಿದೆ.
ಕಳಪೆ ಆಹಾರ ನೀಡುತ್ತಿದ್ದ ಹಾಗೂ ಸ್ವಚ್ಛತೆ, ಆಹಾರ ಸುರಕ್ಷತಾ ನಿಯಮ ಪಾಲಿಸದ ಪಿಜಿಗಳಿಗೆ ಆಹಾರ ಸಚಿವ ಉಯು.ಟಿ.ಖಾದರ್ ಸೂಚನೆ ಮೇರೆಗೆ ನೋಟಿಸ್ ಜಾರಿ ಮಾಡಲಾಗಿದೆ.



