
ಪ್ರಗತಿವಾಹಿನಿ ಸುದ್ದಿ: ಕೆಪಿಎಸ್ ಸಿ ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಕೆಪಿಎಸ್ ಸಿ ಸದಸ್ಯೆ ಶಾಂತಾ ಹೊಸಮನಿ ನಾಪತ್ತೆಯಾಗಿದ್ದಾರೆ. ಹಗರಣ ಸಂಬಂಧ ಇಡಿ ಪ್ರಕರಣ ದಾಖಲಾಗುತ್ತಿದ್ದಂತೆ ಶಾಂತಾ ಹೊಸಮನಿ ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ.
ಕೆಪಿಎಸ್ ಸಿ ಅಕ್ರಮದಲ್ಲಿ ಶಾಂತಾ ಹೊಸಮನಿ ಕೂಡ ಭಾಗಿಯಾಗಿದ್ದಾರೆ ಎನ್ನಲಾಗಿದೆ. ತನಿಖೆ ನಡೆಸುತ್ತಿರುವ ಸಿಐಡಿ ಅಧಿಕಾರಿಗಳು ಈಗಾಗಲೇ ಶಾಂತಾ ಹೊಸಮನಿಯವರಿಗೆ ವಿಚಾರಣೆಗೆ ಹಾಜರಾಗುವಂತೆ ಎರಡು ಬಾರಿ ನೋಟಿಸ್ ನೀಡಿದ್ದರು. ಆದರೆ ಯಾವುದೇ ವಿಚಾರಣೆಗೆ ಹಾಜರಾಗಿಲ್ಲ. ಈ ಹಿನ್ನೆಲೆಯಲ್ಲಿ ಸಿಐಡಿ ಅಧಿಕಾರಿಗಳು ಶಾಂತಾ ಹೊಸಮನಿ ಪತ್ತೆಗಾಗಿ ಲುಕ್ ಔಟ್ ನೋಟಿಸ್ ಹೊರಡಿಸಿದ್ದಾರೆ.
ಬಂಧನ ಭೀತಿಯಲ್ಲಿರುವ ಶಾಂತಾ ಹೊಸಮನಿ ತಲೆಮರೆಸಿಕೊಂಡಿದ್ದಾರೆ ಎನ್ನಲಾಗಿದೆ. ಕೆಪಿಎಸ್ ಸಿ ಹಗರಣ ಸಂಬಂಧ ಆರಂಭದಲ್ಲಿ ಇಡಿ ದಾಳಿ ನಡೆಸಿದ್ದ ವೇಳೆಯೇ ಶಾಂತಾ ಹೊಸಮನಿ ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ.



